ರಾಜ್ಯದಲ್ಲಿ ಆನ್‌ಲೈನ್ ಗೇಮಿಂಗ್‌ಗೆ ಹೈಕೋರ್ಟ್ ಇಂದು ಗ್ರೀನ್ ಸಿಗ್ನಲ್ ನೀಡಿದೆ.
ರಾಜ್ಯದಲ್ಲಿ ಆನ್‌ಲೈನ್ ಗೇಮಿಂಗ್ ನಿಷೇಧವಾಗಿತ್ತು. ನಿಷೇಧ ಪ್ರಶ್ನಿಸಿದ್ದ ಅರ್ಜಿ ಕುರಿತು ಇಂದು ಕೋರ್ಟ್ ತೀರ್ಪು ನೀಡಿದ್ದು, ಆನ್‌ಲೈನ್ ಗೇಮಿಂಗ್‌ಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಸರ್ಕಾರದ ಕ್ರಮ ಸಂವಿಧಾನ ಬದ್ಧವಾಗಿಲ್ಲ. ಆನ್‌ಲೈನ್ ಗೇಮಿಂಗ್ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ. ಈಗಿನ ಆದೇಶ ಕಾನೂನು ಬಾಹಿರ ಎಂದು ಹೈಕೋರ್ಟ್ ತಿಳಿಸಿದೆ.
ಸರ್ಕಾರ ಅ. 10 ರಿಂದ ಆನ್‌ಲೈನ್ ಗೇಮಿಂಗ್ ನಿಷೇಧಿಸಿತ್ತು. ಆನ್‌ಲೈನ್ ಗೇಮಿಂಗ್ ಕಂಪನಿಗಳು ಕೋರ್ಟ್‌ಗೆ ಪ್ರಶ್ನಿಸಿದ್ದವು. ಇದರ ತೀರ್ಪು ಇಂದು ನೀಡಲಾಗಿದೆ. ನ್ಯಾಯಮೂರ್ತಿ ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ರ ಪೀಠ ಆನ್‌ಲೈನ್ ಗೇಮಿಂಗ್ ನಿಷೇಧ ರದ್ದುಗೊಳಿಸಿ, ಗ್ರೀನ್ ಸಿಗ್ನಲ್ ನೀಡಿದೆ. ಡ್ರೀಮ್ ಇಲೆವೆನ್, ಪೇ ಟಿಎಂ ಫಸ್ಟ್, ಗೇಮ್ ಜಿ ಸೇರಿದಂತೆ ಹಲವು ಆಪ್‌ಗಳಿಗೆ ನಿಷೇಧ ಹೇರಲಾಗಿತ್ತು.