Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದು ಗೆ ಫೈನ್‌ ಹಾಕಿದ ಹೈಕೋರ್ಟ್‌

ಹೈಕೋರ್ಟ್‌
ಬೆಂಗಳೂರು : 2022ರ ಏಪ್ರಿಲ್‌ನಲ್ಲಿ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ರೇಸ್‌ ಕೋರ್ಸ್‌ ರಸ್ತೆಯ ಬಳಿ ಕಾಂಗ್ರೆಸ್‌ ನಡೆಸಿದ್ದ ಪ್ರತಿಭಟನೆಯ ವೇಳೆ ರಸ್ತೆ ತಡೆ ನಡೆಸಲಾಗಿತ್ತು. ಪ್ರತಿಭಟನೆ ವೇಳೆ ರಸ್ತೆತಡೆ ನಡೆಸಿದ್ದರಿಂದ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗಿದ್ದಲ್ಲದೇ ವಾಹನದಟ್ಟಣೆ ಕೂಡ ಉಂಟಾಗಿತ್ತೆಂದು ಅವರ ವಿರುದ್ದ ದೂರು ನೀಡಿಲಾಗಿತ್ತು. ಈ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ ಅವರಿಗೆ 10 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. 

ಪ್ರತಿಭಟನೆಯ ವೇಳೆ ಸಾರ್ವಜನಿಕ ಸಂಚಾರಕ್ಕೆ ಅಡ್ಡಿ ಉಂಟು ಮಾಡಿದ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್‌ 10 ಸಾವಿರ ರೂ. ದಂಡ ವಿಧಿಸಿ ನ್ಯಾ. ಕೃಷ್ಣ ದೀಕ್ಷಿತ್‌ ಅವರ ನೇತೃತ್ವದ ಪೀಠ ಈ ಆದೇಶ ಹೊರಡಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗೋಬಿ ಮಂಚೂರಿಗೆ ಈ ನಗರದಲ್ಲಿ ನಿಷೇಧ ಯಾಕೆ ಗೊತ್ತಾ...!