Publish Date: Sun, 23 Jan 2022 (20:26 IST)
Updated Date: Sun, 23 Jan 2022 (20:39 IST)
ಬೆಂಗಳೂರು:-ಕರ್ನಾಟಕ ಗಡಿ ಮತ್ತು ರಾಜ್ಯ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷ ಹಾಗೂ ರಾಜ್ಯ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಶನಿವಾರ ಮಧ್ಯರಾತ್ರಿ ನಿಧನರಾದರು.
ಅವರಿಗೆ 68 ವರ್ಷ ವಯಸ್ಸಾಗಿತ್ತು. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಸಮೀಪದಲ್ಲಿನ ಅವರ ಸ್ವಗೃಹದಲ್ಲಿ ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಂಜುನಾಥ್ ಅವರು 2000 ಡಿಸೆಂಬರ್ 11ರಂದು ಹೈಕೋರ್ಟ್ ನ್ಯಾಯಮೂರ್ತಿ ಯಾಗಿ ನೇಮಕಗೊಂಡಿದ್ದರು. 2015ರ ಏಪ್ರಿಲ್ 20ರಂದು ಹಿರಿಯ ನ್ಯಾಯಮೂರ್ತಿಯಾಗಿ ನಿವೃತ್ತಿ ಹೊಂದಿದ್ದರು.
ಭಾನುವಾರ (ಜ.23) ಮಧ್ಯಾಹ್ನ 3 ಗಂಟೆಗೆ ಕುಣಿಗಲ್ ರಸ್ತೆಯ ಕೆಂಪಲಿಂಗನಹಳ್ಳಿಯ ಅವರ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಂಟುಂಬ ಮೂಲಗಳು ತಿಳಿಸಿದೆ.