Publish Date: Sun, 23 Jan 2022 (09:14 IST)
Updated Date: Sun, 23 Jan 2022 (10:16 IST)
ಬೆಂಗಳೂರು : ತಡರಾತ್ರಿ ಹೃದಯಾಘಾತದಿಂದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ವಿಧಿವಶರಾಗಿದ್ದಾರೆ.
ಗಡಿ ಸಂರಕ್ಷಣಾ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ನ್ಯಾ. ಮಂಜುನಾಥ್ ನಿಧನರಾಗಿದ್ದು, ಬೆಂಗಳೂರಿನ ಕಾಮಾಕ್ಷಿಪಾಳ್ಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಮಧ್ಯಾಹ್ನ 12 ಗಂಟೆವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನ ಇರಲಿದ್ದು, ಮಧ್ಯಾಹ್ನ 3 ಗಂಟೆಗೆ ನೆಲಮಂಗಲದ ತೋಟದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಹೇಳಲಾಗಿದೆ.
Ramya kosira
Publish Date: Sun, 23 Jan 2022 (09:14 IST)
Updated Date: Sun, 23 Jan 2022 (10:16 IST)