Select Your Language

Notifications

webdunia
webdunia
webdunia
webdunia

5 ರಿಂದ 9ನೇ ತರಗತಿವರೆಗೆ ಪಬ್ಲಿಕ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ ಆದೇಶ

High Court

geetha

bangalore , ಬುಧವಾರ, 6 ಮಾರ್ಚ್ 2024 (21:00 IST)
ಬೆಂಗಳೂರು-ಈ ಶೈಕ್ಷಣಿಕ ವರ್ಷದಿಂದ ಅನ್ವಯವಾಗುವಂತೆ 5, 8, 9 ಹಾಗೂ 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಿಗದಿಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಹೈಕೋರ್ಟ್ ಈ ಆದೇಶದಿಂದ ಇದೇ ಮಾರ್ಚ್ 9ರಿಂದ 11 ರವರೆಗೆ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿದೆ.
 
ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9 ಮತ್ತು 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ನ್ಯಾಯಪೀಠ ಈ ತೀರ್ಪು ಪ್ರಕಟಿಸಿದೆ.
 
ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದ್ದು ಹೈ ಕೋರ್ಟ್‌ನ ಈ ಆದೇಶದಿಂದ ಇದೇ ಮಾರ್ಚ್9 ರಿಂದ 11 ರವರೆಗೂ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿದೆ.ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯಿದೆಯಡಿ 2023ರ ಅಕ್ಟೋಬರ್ 6 ಮತ್ತು 9 ರಂದು ಎರಡು ಸುತ್ತೋಲೆಗಳನ್ನ ಹೊರಡಿಸಿ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿತ್ತು.
 
ಇದನ್ನು ಪ್ರಶ್ನಿಸಿದ್ದ ಅರ್ಜಿದಾರರ‌ ಸಂಘ, ಶಿಕ್ಷಣ ಇಲಾಖೆ ಸುತ್ತೋಲೆ ಕೇವಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ.ಇದು ಪಠ್ಯಕ್ರಮದ ಭಾಗವಲ್ಲ. ಆದರೆ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಸಿದ್ಧಪಡಿಸಿರುವುದಾಗಿ ಸರ್ಕಾರ ಹೇಳುತ್ತಿದೆ.
 
ಖಾಸಗಿ ಶಾಲೆಗಳ ಪಠ್ಯಕ್ರಮ ಹಾಗೂ ಸರ್ಕಾರಿ ಶಾಲೆಗಳ ಪಠ್ಯಕ್ರಮ ವಿಭಿನ್ನವಾಗಿವೆ.ಕಲಿಕಾ ಚೇತರಿಕೆ ಪಠ್ಯಕ್ರಮದ ಪ್ರಶ್ನೆಗಳಿಗೆ ಖಾಸಗಿ ಶಾಲಾ ಮಕ್ಕಳು ಉತ್ತರಿಸಲು ಕಷ್ಟ ಹಾಗಾಗಿ, ಎಲ್ಲ ಮಕ್ಕಳಿಗೂ ಅನ್ವಯವಾಗುವಂತೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ಅವಕಾಶ ನೀಡಬಾರದು ಎಂದು ಕೋರಿದರು.ಸರ್ಕಾರ ಪರ ವಕೀಲರು, ಕಲಿಕಾ ಚೇತರಿಕೆ ಕೂಡಾ ಪಠ್ಯಕ್ರಮದ ಭಾಗವೇ ಆಗಿದೆ.ಸಾಮಾನ್ಯ ಪಠ್ಯಕ್ರಮದಿಂದಲೇ ಕಲಿಕಾ ಚೇತರಿಗೆ ಪಠ್ಯಕ್ರಮ ಸಿದ್ಧಪಡಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಮ್ಮಗೂ ಬೆದರಿಕೆ ಇ-ಮೇಲ್ ಬಂದಿದೆ-ಪರಮೇಶ್ವರ್