ಬೆಂಗಳೂರು-ರಾಕ್ ಲೈನ್ ಮಾಲ್ ಗೆ ಬಿಬಿಎಂಪಿಯಿಂದ ತೆರಿಗೆ ಪಾವತಿಸದ ಕಾರಣ ಬೀಗ ಮುದ್ರೆ ಜಡಿಯಲಾಗಿತ್ತು. ಇಂತಹ ಬೀಗ ಮುದ್ರೆಯನ್ನು ತೆರವುಗೊಳಿಸುವಂತೆ ಹೈಕೋರ್ಟ್ ಆದೇಶಿಸಿದೆ.ರಾಕ್ ಲೈನ್ ಮಾಲ್ ನಿಂದ 2011 ರಿಂದ 2022-23 ರವರೆಗೆ ಬಾಕಿ ಉಳಿಸಿಕೊಂಡಿರುವ 11.51 ಕೋಟಿ ರೂ. ಆಸ್ತಿ ತೆರಿಗೆಯನ್ನು ಪಾಲಿಕೆಗೆ ಪಾವತಿಸಬೇಕಿದೆ. ಬಾಕಿ ತೆರಿಗೆ ಪಾವತಿಸಲು ಈಗಾಗಲೇ ಡಿಮಾಂಡ್ ನೋಟೀಸ್ ನೀಡಿದ್ದರು ತೆರಿಗೆಯನ್ನು ಪಾವತಿಸಿರುವುದಿಲ್ಲ. ಹೀಗಾಗಿ ದಾಸರಹಳ್ಳಿ ವಲಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಾಕ್ ಲೈನ್ ಮಾಲ್ ಅನ್ನು ಸೀಜ್ ಮಾಡಿದ್ದರು.
ಇದೀಗ ಹೈಕೋರ್ಟ್ ರಾಕ್ ಲೈನ್ ಮಾಲ್ ಬೀಗಮುದ್ರೆಯನ್ನು ತೆರವುಗೊಳಿಸುವಂತೆ ಸೂಚಿಸಿದೆ. ಅಲ್ಲದೇ ಬಿಬಿಎಂಪಿ ಆದೇಶ ಪ್ರಶ್ನಿಸಿ ಪ್ರತ್ಯೇಕ ಅರ್ಜಿಯನ್ನು ಸಲ್ಲಿಸುವಂತೆ ಅರ್ಜಿದಾರರಿಗೆ ಕಾಲಾವಕಾಶ ನೀಡಿ, ರಿಟ್ ಅರ್ಜಿಯನ್ನು ಇತ್ಯರ್ಥಪಡಿಸಿದೆ.