ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ಧಾರ ಪ್ರಕಟಿಸಿದೆ. ರಾಜ್ಯ ಸರ್ಕಾರದ 5 ಮತ್ತು 8 ನೇ ತರಗತಿ ಬೋರ್ಡ್ ಎಕ್ಸಾಂ ಆದೇಶ ರದ್ದು ಪಡಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ, ರಾಜ್ಯ ಪಠ್ಯಕ್ರಮದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ನಿರ್ಧಾರ ಪ್ರಶ್ನಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ಧಾರ ಪ್ರಕಟಿಸಿದೆ. ರಾಜ್ಯ ಸರ್ಕಾರದ 5 ಮತ್ತು 8 ನೇ ತರಗತಿ ಬೋರ್ಡ್ ಎಕ್ಸಾಂ ಆದೇಶ ರದ್ದು ಪಡಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ. ಅನುದಾನರಹಿತ ಶಾಲೆಗಳ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ ಏಕ ಸದಸ್ಯ ಪೀಠ ಈ ತೀರ್ಮಾನ ಪ್ರಕಟಿಸಿದೆ.