Select Your Language

Notifications

webdunia
webdunia
webdunia
webdunia

ಹೈಡ್ರಾಮಾ ನಡುವೆ ಗುತ್ತಿಗೆದಾರ ಸಂತೋಷ್‌ ಅಂತ್ಯಕ್ರಿಯೆ!

ks eshwarappa belagavi santhosh ಸಂತೋಷ್‌ ಕೆಎಸ್‌ ಈಶ್ವರಪ್ಪ ಬೆಳಗಾವಿ
bangalore , ಗುರುವಾರ, 14 ಏಪ್ರಿಲ್ 2022 (14:04 IST)
ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಅಂತ್ಯ ಹೈಡ್ರಾಮಾ ನಡುವೆ ಬೆಳಗಾವಿ ತಾಲೂಕಿನ ಬಡಸ್ ಗ್ರಾಮದಲ್ಲಿ ನೆರವೇರಿತು.
ಕಾಂಗ್ರೆಸ್ ಮುಖಂಡರು ಹಾಗೂ ಸ್ಥಳೀಯ ಮುಖಂಡರು ತೀವ್ರ ವಿರೋಧದ ನಡುವೆಯೂ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಗುರುವಾರ ಬೆಳಗ್ಗೆ ಸಂತೋಷ್ ಪಾಟೀಲ್ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಗ್ರಾಮದಲ್ಲಿ ಮೂರು ಮದುವೆ ಇದ್ದ ಕಾರಣ ಅಂತ್ಯಕ್ರಿಯೆ ನೆರವೇರಿಸಿ ಎಂದು ಗ್ರಾಮಸ್ಥರು ಕೋರಿದರು. ಹೊರಗೆ ಕೂಡ ಪ್ರತಿಭಟನೆಗೆ ಆಕ್ಷೇಪ ಇದೆ.
ನ್ಯಾಯಕ್ಕಾಗಿ ಹೋರಾಟ ಮಾಡೋಣ. ಬಾಕಿ ಬಿಲ್ ಮಂಜೂರಾತಿ ಹಾಗೂ ಕುಟುಂಬಸ್ಥರ ಪರಿಹಾರಕ್ಕೆ ಸರ್ಕಾರಕ್ಕೆ ಬಯಸೋಣ. ಆದರೆ ಅಂತ್ಯಕ್ರಿಯೆ ನೆರವೇರಿಸಲು ಮಾಡಿಕೊಡಿ ಎಂದು ಕೋರಿದರು. ಇದಕ್ಕೆ ಕುಟುಂಬಸ್ಥರು ಒಪ್ಪಿಗೆ ಸೂಚಿಸಿದರು.
ವಿಧಿವಿಧಾನಗಳು ಮುಗಿಯುವವರೆಗೂ ಅಂತ್ಯಸಂಸ್ಕಾರಕ್ಕೆ ಕಾಂಗ್ರೆಸ್ ವಿರುದ್ಧ ವಿರೋಧ ಇದೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅವರ ಆಪ್ತ ಅಡಿವೇಶ ಇಟಗಿ ಅಂತ್ಯಕ್ರಿಯೆಗೆ ವಿರೋಧ ಎದುರಾಗಿದೆ.
ಪರಿಹಾರ ಘೋಷಣೆ ಹಾಗೂ ಬಾಕಿ ಬಿಲ್ ಮಂಜೂರಾತಿ ಮಾಡಿಸಬೇಕು ಅಲ್ಲಿಯವರೆಗೂ ಅಂತ್ಯಕ್ರಿಯೆ ಮಾಡಬೇಡಿ ಎಂದು ಹೇಳಿದರು. ಜಿಲ್ಲೆಯಲ್ಲೇ ಇರುವ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಇಲ್ಲವೇ ಬಿಜೆಪಿ ಸ್ಥಾನಕ್ಕೆ ಬರಬೇಕು ಎಂದು ಪಟ್ಟು ಹಿಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಅಮೆರಿಕಕ್ಕೆ ತಿರುಗೇಟು ನೀಡಿದ ಭಾರತ?