ಸೋಮವಾರದಿಂದ ಪ್ರೌಢಶಾಲೆ ಆರಂಭ: ಸಿಎಂ ಬಸವರಾಜ ಬೊಮ್ಮಾಯಿ

Webdunia
ಶುಕ್ರವಾರ, 11 ಫೆಬ್ರವರಿ 2022 (19:58 IST)
ರಾಜ್ಯದಲ್ಲಿ ಹಿಜಾಬ್ ವಿವಾದದಿಂದ ಬಂದ್ ಆಗಿರುವ ಶಾಲೆಗಳನ್ನು ಮತ್ತೆ ತೆರೆಯುವಂತೆ ಹೈಕೋರ್ಟ್ ಸೂಚಿಸಿದ ಬೆನ್ನಲೇ ಸಭೆ ನಡೆಸಿದ ಸಿಎಂ ಸಿಎಂ ಬಸವರಾಜ ಬೊಮ್ಮಾಯಿ , ಸೋಮವಾರದಿಂದ ಮೊದಲ ಹಂತದಲ್ಲಿ 10 ನೇ ತರಗತಿವರೆಗೆ ಶಾಲೆ ಪ್ರಾರಂಭವಾಗಲಿದೆ ಎಂದು ಹೇಳಿದ್ದಾರೆ.
ಶಾಲೆ ಆರಂಭದ ಬಗ್ಗೆ ಶಿಕ್ಷಣ ಸಚಿವರು, ಗೃಹ ಸಚಿವರ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಹೈಕೋರ್ಟ್ ಶಾಲಾ ಕಾಲೇಜು ಆರಂಭಕ್ಕೆ ಸೂಚಿಸಿದ ಕಾರಣ ಸೋಮವಾರ ಮೊದಲ ಹಂತದಲ್ಲಿ 10 ನೇ ತರಗತಿವರೆಗೆ ಶಾಲೆ ಆರಂಭಿಸಲಾಗುವುದು. ಎರಡನೇ ಹಂತದಲ್ಲಿ ಪಿಯುಸಿ, ಡಿಗ್ರೀ ತರಗತಿ ಆರಂಭವಾಗಲಿದೆ ಎಂದರು.
ರಾಜ್ಯದಲ್ಲಿ ಉಂಟಾದ ಘರ್ಷಣೆಯಿಂದಾಗಿ ಸರ್ಕಾರ 3 ದಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿತ್ತು.ಇದೀಗ ಹೈಕೋರ್ಟ್​ ಶಿಕ್ಷಣ ಕೇಂದಗಳನ್ನು ಮುಚ್ಚದಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸೋಮವಾರ ಪುನಾರಂಭಿಸಲಾಗುವುದು ಎಂದರು.
ಇನ್ನು ನಾಳೆ ಸಂಜೆ ಎಲ್ಲಾ ಸಚಿವರ, ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿ ಆಯಾ ಜಿಲ್ಲೆಯ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲಾಗುವುದು. ಬಳಿಕ ಎಲ್ಲ ಶಾಲಾ – ಕಾಲೇಜು ಆರಂಭಿಸಲು ನಿರ್ಧರಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಮಾಹಿತಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಆರ್ ಎಸ್ಎಸ್ ಹೀಗೆ ಬೆದರಿಕೆ ಹಾಕುತ್ತದೆ ಎಂದು ಅಡಿಯೋ ಬಾಂಬ್ ಹಾಕಿದ ಪ್ರಿಯಾಂಕ್ ಖರ್ಗೆ

ರಸ್ತೆ ಸರಿ ಮಾಡಿ ಎಂದರೆ ಉದ್ಯಮಿಗಳಿಗೇ ಬೆದರಿಸುವ ಕಾಂಗ್ರೆಸ್ ಸರ್ಕಾರ: ಸಿಟಿ ರವಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರಸ್ತೆಗೆ ಡಾಂಬರು ಹಾಕ್ತಿದ್ದೀವಿ ನೋಡ್ಕೊಳ್ಳಿ ಎಂದ ಡಿಕೆ ಶಿವಕುಮಾರ್

ಸಿಎಂ ಆಗಬೇಕೆಂದುಕೊಂಡಿರುವ ಡಿಕೆ ಶಿವಕುಮಾರ್ ಗೆ ಹಾಸನಾಂಬೆ ಕೊಟ್ಟ ಸೂಚನೆ ಏನು

ಮುಂದಿನ ಸುದ್ದಿ
Show comments