Webdunia - Bharat's app for daily news and videos

Install App

ಹೈವೋಲ್ಟೇಜ್ ಪಂದ್ಯ - ಟೀಂ ಇಂಡಿಯಾ ಗೆಲ್ಲಲು 40 ಬಾಲ್ ಗಳಲ್ಲಿ 70 ರನ್ ಬೇಕು

Webdunia
ಬುಧವಾರ, 10 ಜುಲೈ 2019 (18:50 IST)
ವಿಶ್ವಕಪ್ ನ ಸೆಮಿಫೈನಲ್ ನಲ್ಲಿ ಸೆಣಸುತ್ತಿರುವ ಭಾರತ – ನ್ಯೂಜಿಲೆಂಡ್ ನಡುವಿನ ಕದನ ಹೈವೋಲ್ಟೇಜ್ ಟೆನ್ಶನ್ ಸೃಷ್ಟಿ ಮಾಡಿದೆ.

ನಿನ್ನೆ ನ್ಯೂಜಿಲೆಂಡ್ 46.1 ಓವರ್ ಗಳಲ್ಲಿ 211 ರನ್ ಗಳಿಸಿದ್ದಾಗ ಮಳೆ ಬಂದಿದ್ದರಿಂದ ಪಂದ್ಯ ಅರ್ಧಕ್ಕೇ ಸ್ಥಗಿತಗೊಂಡಿತು. ಮೀಸಲು ದಿನವಾದ ಇಂದು ಪಂದ್ಯ ಆರಂಭವಾಗಿದ್ದರೂ ಭಾರತದ ಪಾಲಿಗೆ ಆಘಾತಕಾರಿಯಾಗಿದೆ. ಇಂದು 50 ಓವರ್ ಗಳ ಕೋಟಾ ಪೂರೈಸಿದ ನ್ಯೂಜಿಲೆಂಡ್ 8 ವಿಕೆಟ್ ನಷ್ಟಕ್ಕೆ 239 ರನ್ ಗಳಿಸಿತು.

ಈ ಮೊತ್ತವನ್ನು ಭಾರತದ ಬಲಾಢ್ಯ ಬ್ಯಾಟ್ಸ್ ಮನ್ ಗಳು ಸುಲಭವಾಗಿ ಬೆನ್ನತ್ತಬಹುದು ಎಂದೇ ನಿರೀಕ್ಷಿಸಲಾಗಿತ್ತು. ಆದರೆ ತನ್ನ ಸರದಿ ಆರಂಭಿಸಿ ಭಾರತ ಇತ್ತೀಚೆಗಿನ ವರದಿ ಬಂದಾಗ ಪ್ರಮುಖ  6 ವಿಕೆಟ್ ಕಳೆದುಕೊಂಡು 173 ರನ್ ಗಳಿಸಿ ಹೀನಾಯ ಸ್ಥಿತಿಯಲ್ಲಿದೆ.

40 ಬಾಲ್ ಗಳಲ್ಲಿ 70 ರನ್ ಗಳಿಸಬೇಕಾದ ಒತ್ತಡದಲ್ಲಿ ಭಾರತ ಸಿಲುಕಿದೆ.

ಅದರಲ್ಲೂ ಇನ್ ಫಾರ್ಮ್ ಬ್ಯಾಟ್ಸ್ ಮನ್ ಗಳಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಪೆವಿಲಿಯನ್ ಸೇರಿಕೊಂಡಿರುವುದು ಭಾರತದ ಪಾಲಿಗೆ ದೊಡ್ಡ ಆಘಾತವಾಗಿದೆ. ಹಿಂದೆ ಪಾಕಿಸ್ತಾನ ವಿರುದ್ಧವೂ ಭಾರತ ರನ್ ಚೇಸ್ ಮಾಡುವಾಗ ಇದೇ ಪರಿಸ್ಥಿತಿ ಎದುರಾಗಿತ್ತು. ಆಗ ಭಾರತ ಹೀನಾಯ ಸೋಲುಂಡಿದ್ದನ್ನು ಅಭಿಮಾನಿಗಳು ಮರೆತಿಲ್ಲ. ಈಗಲೂ ಭಾರತ ತಂಡ ಹೆಚ್ಚು ಕಮ್ಮಿ ಅದೇ ಪರಿಸ್ಥಿತಿಯಲ್ಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments