Select Your Language

Notifications

webdunia
webdunia
webdunia
webdunia

ಹೈಕಮಾಂಡ್ ಭೇಟಿ ಬಗ್ಗೆ ವಿಶೇಷ ಅರ್ಥ ಕಲ್ಪಿಸುವುದು ಬೇಡ: ಜಿ.ಪರಮೇಶ್ವರ್

ಹೈಕಮಾಂಡ್ ಭೇಟಿ ಬಗ್ಗೆ ವಿಶೇಷ ಅರ್ಥ ಕಲ್ಪಿಸುವುದು ಬೇಡ: ಜಿ.ಪರಮೇಶ್ವರ್
ಬೆಂಗಳೂರು , ಶನಿವಾರ, 30 ಏಪ್ರಿಲ್ 2016 (15:16 IST)
ದೆಹಲಿಗೆ ಹೋದಾಗ ಹೈಕಮಾಂಡ್ ಭೇಟಯಾಗುವುದು ಪದ್ದತಿ, ನಾವೆಲ್ಲಾ ದೆಹಲಿಗೆ ಹೋದಾಗ ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತೇವೆ ಇದರಲ್ಲಿ ವಿಶೇಷವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ. 
 
ಬೊಪ್ಪಸಮುದ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್ ಹೈಕಮಾಂಡ್ ಭೇಟಿ ಬಗ್ಗೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದು ಹೇಳಿದ್ದಾರೆ.
 
ಎಸ್.ಎಂ.ಕೃಷ್ಣ ಸೇರಿದಂತೆ ಹಲವು ನಾಯಕರು ರಾಜ್ಯದಿಂದ ದೆಹಲಿಗೆ ಹೋದಾಗ ಹೈಕಮಾಂಡ್ ನಾಯಕರನ್ನು ಭೇಟಿಯಾಗುವುದು ಸಹಜ ಎಂದರು. 
 
ವಿಪಕ್ಷಗಳ ಅನಗತ್ಯವಾಗಿ ಹಲವು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿವೆ. ವಿಪಕ್ಷಗಳ ಆರೋಪಗಳು ಸತ್ಯಕ್ಕೆ ದೂರವಾಗಿದ್ದು ಸುಳ್ಳಿನ ಕಂತೆಯಾಗಿವೆ ಎಂದು ಕೆಪಿಸಿಸಿ ಅದ್ಯಕ್ಷ ಜಿ.ಪರಮೇಶ್ವರ್ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

Share this Story:

Follow Webdunia kannada

ಮುಂದಿನ ಸುದ್ದಿ

ರಾಜೆ ಮತ್ತೊಂದು ಹೆಲಿಕಾಪ್ಟರ್ ಕೊಳ್ಳಲು ಬಯಸಿದ್ದರು