Publish Date: Tue, 22 Feb 2022 (15:36 IST)
Updated Date: Tue, 22 Feb 2022 (16:45 IST)
ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ 9ನೇ ದಿನದ ವಿಚಾರಣೆ ಕರ್ನಾಟಕ ಹೈಕೋರ್ಟ್‌ನಲ್ಲಿ ಇಂದು ಆರಂಭವಾಗಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ಪೀಠದಲ್ಲಿ ಒಂದು ವಾರದಿಂದ ಅರ್ಜಿಗಳ ವಿಚಾರಣೆ ನಡೆಯುತ್ತಿದೆ.
ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರು ಸಹ ತ್ರಿಸದಸ್ಯ ಪೀಠ ಇಂದು ವಿಚಾರಣೆಯನ್ನು ಮುಂದುವರೆಸಿದೆ.