ಸರಕಾರಿ, ಖಾಸಗಿ ವೈದ್ಯರಿಗೆ ಹೈಕೋರ್ಟ್ ಡೆಡ್‌ಲೈನ್ ನೀಡಿದ್ದು, ಮಧ್ಯಾಹ್ನ 2 ಗಂಟೆಯೊಳಗೆ ಸಮಸ್ಯೆ ಇತ್ಯರ್ಥಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಲಿದೆ ಎಂದು ಎಚ್ಚರಿಕೆ ನೀಡಿದೆ.
ರಾಜ್ಯ ಸರಕಾರ ಮತ್ತು ಖಾಸಗಿ ವೈದ್ಯರ ನಡುವೆ ನಡೆಯುತ್ತಿರುವ ಕೆಪಿಎಂಇ ಜಟಾಪಟಿ ತೀವ್ರವಾದ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿತ್ತು.
ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಇಂದು ಮಧ್ಯಾಹ್ನದೊಳಗೆ ಸರಕಾರ ಮತ್ತು ವೈದ್ಯರು ಚರ್ಚೆ ನಡೆಸಿ ಮುಷ್ಕರ ಅಂತ್ಯಗೊಳಿಸಬೇಕು ಎಂದು ತಿಳಿಸಿದೆ.
ಹೈಕೋರ್ಟ್ ಹಂಗಾಮಿ ನ್ಯಾಯಾಧೀಶ ರಮೇಶ್ ನೇತೃತ್ವದ ನ್ಯಾಯಪೀಠ, ರಾಜ್ಯ ಸರಕಾರ ಮತ್ತು ಖಾಸಗಿ ವೈದ್ಯರಿಗೆ ಎಚ್ಚರಿಕೆ ನೀಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.