ಮಹದಾಯಿ ಹೋರಾಟಗಾರರ ಮೇಲೆ ಪೊಲೀಸರ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾಯಮೂರ್ತಿ ವೇಣುಗೋಪಾಲಗೌಡ ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ರಾಜ್ಯ ಪೊಲೀಸರು ಅಮಾಯಕ ರೈತರ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡುವ ಮೂಲಕ ರೋಷಾವೇಶ ತೋರಿದ್ದಾರೆ. ಲಾಠಿ ಚಾರ್ಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ ಪೊಲೀಸ್ ಪೇದೆಗಳ ವಿರುದ್ಧ ಕ್ರಮ ತೆಗೆದುಕೊಂಡರೆ ಸಾಲದು, ಹಿರಿಯ ಅಧಿಕಾರಿಗಳ ವಿರುದ್ಧವು ಕ್ರಮ ಕೈಗೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಓಬವ್ವ ಕಿಂಡಿಯಿಂದ ಬರುವ ವೈರಿಗಳ ಮೇಲೆ ಓನಕೆಯನ್ನು ಬೀಸಿ ತನ್ನ ರೋಷವನ್ನು ತೋರಿ ಸಾಮ್ರಾಜ್ಯವನ್ನು ಉಳಿಸಿದ್ದಳು. ಆದರೆ, ರಾಜ್ಯ ಪೊಲೀಸರು ಯಾವ ಪುರುಷಾರ್ಥಕ್ಕಾಗಿ ಅಮಾಯಕ ರೈತರು, ಮಹಿಳೆಯರು ಹಾಗೂ ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಪೊಲೀಸರು ಎರಡು ಬದಿಯಲ್ಲಿ ಪೊಲೀಸ್ ವಾಹನಗಳನ್ನು ನಿಲ್ಲಿಸಿ ಮಧ್ಯದಲ್ಲಿ ತಪ್ಪಿಸಿಕೊಂಡು ಓಡಲು ಯತ್ನಿಸುವ ಹೋರಾಟಗಾರರ ಮೇಲೆ ಲಾಠಿ ಬೀಸಿ ದೌರ್ಜನ್ಯ ಎಸಗಿದ್ದಾರೆ. ಹೀಗೆ ವರ್ತಿಸುವುದೇ ಪ್ರಜಾಪ್ರಭುತ್ವವೇ ಎಂದು ಹೈಕೋರ್ಟ್ ನ್ಯಾಯಾಧೀಶರು ರಾಜ್ಯ ಸರಕಾರಕ್ಕೆ ಛೀಮಾರಿ ಹಾಕಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.