Webdunia - Bharat's app for daily news and videos

Install App

ಅಫ್ಗನ್​​ ಮಹಿಳೆಯರಿಗೆ ಉನ್ನತ ಶಿಕ್ಷಣ ನಿಷೇಧ

Webdunia
ಬುಧವಾರ, 21 ಡಿಸೆಂಬರ್ 2022 (15:12 IST)
ಅಫ್ಘಾನಿಸ್ತಾನದ ವಿಶ್ವವಿದ್ಯಾನಿಲಯಕ್ಕೆ ವಿದ್ಯಾರ್ಥಿನಿಯರಿಗೆ ಪ್ರವೇಶವನ್ನು ತಾಲಿಬಾನ್ ಸರ್ಕಾರ ನಿಷೇಧಿಸಿದೆ. ಕಳೆದ ವರ್ಷ ಅಧಿಕಾರವನ್ನು ವಶಪಡಿಸಿಕೊಂಡಾಗ ಮೃದುವಾದ ಆಡಳಿತವನ್ನು ಭರವಸೆ ನೀಡಿದ್ದರೂ, ವಿದ್ಯಾರ್ಥಿನಿಯರಿಗೆ ಎಲ್ಲಾ ರೀತಿಯ ನಿರ್ಬಂಧಗಳನ್ನು ಹೆಚ್ಚಿಸಿದೆ. ಇದೀಗ ಎಲ್ಲಾ ಸರ್ಕಾರಿ ಮತ್ತು ಖಾಸಗಿ ವಿಶ್ವವಿದ್ಯಾಲಯಗಳಿಗೆ ಉನ್ನತ ಶಿಕ್ಷಣ ಸಚಿವ ನೇದಾ ಮೊಹಮ್ಮದ್ ನದೀಮ್ ಆದೇಶ ಪತ್ರವನ್ನು ನೀಡಿದ್ದು, ಅದರಲ್ಲಿ ಮುಂದಿನ ಸೂಚನೆ ಬರುವವರೆಗೆ ವಿದ್ಯಾರ್ಥಿನಿಯರ ಶಿಕ್ಷಣವನ್ನು ಅಮಾನತುಗೊಳಿಸಬೇಕು. ಈ ಆದೇಶ ತಕ್ಷಣವೇ ಜಾರಿಗೆ ತರಬೇಕು ಎಂದು ತಿಳಿಸಿದೆ. ಈ ಆದೇಶಕ್ಕೆ ಅಮೆರಿಕ ಖಂಡಿನೆ ವ್ಯಕ್ತಪಡಿಸಿದ್ದು, ಅಫ್ಘಾನಿಸ್ತಾನದಲ್ಲಿರುವ ಎಲ್ಲರ ಹಕ್ಕುಗಳನ್ನು ಗೌರವಿಸುವವರೆಗೆ ತಾಲಿಬಾನ್ ಅಂತಾರಾಷ್ಟ್ರೀಯ ಸಮುದಾಯದ ಕಾನೂನುಬದ್ಧ ಸದಸ್ಯತ್ವಕ್ಕೆ ನಿರೀಕ್ಷಿಸಲಾಗುವುದಿಲ್ಲ. ಈ ನಿರ್ಧಾರವು ತಾಲಿಬಾನ್‍ಗೆ ತೊಂದರೆಯನ್ನು ಉಂಟು ಮಾಡುತ್ತದೆ ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments