Select Your Language

Notifications

webdunia
webdunia
webdunia
webdunia

ಸೋಮವಾರ ಕ್ಕೆ ಹಿಜಾಬ್ ವಿಚಾರಣೆ ಮುಂದೂಡಿಕೆ

cm basavaraj bommai
ಬೆಂಗಳೂರು , ಗುರುವಾರ, 10 ಫೆಬ್ರವರಿ 2022 (16:08 IST)
ಕರ್ನಾಟಕದ ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ಮುಸ್ಲಿಂ ವಿದ್ಯಾರ್ಥಿನಿಯರ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆಯಲಿದೆ.
ಬುಧವಾರ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿತ್ತು. ಬಳಿಕ ನ್ಯಾಯಮೂರ್ತಿಗಳು ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದ್ದರು.
 
ಈಗ ಅರ್ಜಿಗಳ ವಿಚಾರಣೆಗೆ ವಿಶೇಷ ಪೂರ್ಣ ಪೀಠವನ್ನು ರಚನೆ ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಪೂರ್ಣ ಪೀಠ ಗುರುವಾರ ಮಧ್ಯಾಹ್ನ 2.30ರಿಂದ ಅರ್ಜಿ ವಿಚಾರಣೆ ನಡೆಯಲಿದೆ.
 
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಶೇಷ ಪೀಠದಲ್ಲಿ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಇದ್ದು, ಗುರುವಾರವೇ ವಿಚಾರಣೆ ಆರಂಭವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸೋಮವಾರದಿಂದ ಶಾಲೆ ಒಪೆನ್ - ಶಿಕ್ಷಣ ಸಚಿವರು