Select Your Language

Notifications

webdunia
webdunia
webdunia
webdunia

ಹಿಜಾಬ್ ವಿಚಾರಣೆ ಫೆ.21ಕ್ಕೆ ಮುಂದೂಡಿಕೆ

cm basavaraj bommai
ಬೆಂಗಳೂರು , ಶುಕ್ರವಾರ, 18 ಫೆಬ್ರವರಿ 2022 (15:42 IST)
ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಕೋರಿ ವಿದ್ಯಾರ್ಥಿನಿಯರು ರಾಜ್ಯ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ತ್ರಿಸದಸ್ಯ ಪೀಠದಲ್ಲಿ ಇಂದು ಮತ್ತೆ ಆರಂಭಗೊಂಡಿದೆ.
 
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾ. ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್​ರ ವಿಸ್ತೃತ ಪೀಠ ವಿಚಾರಣೆ ಆರಂಭಿಸಿದ್ದು, ಇಂದೇ ಅಂತಿಮ ತೀರ್ಪು ಪ್ರಕಟವಾಗುತ್ತಾ ಎನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ.
ತರಗತಿಗಳಲ್ಲಿ ಹಿಜಾಬ್ ನಿರ್ಬಂಧ ವಿಚಾರವಾಗಿ ಹೈಕೋರ್ಟ್ ಪೂರ್ಣಪೀಠದಲ್ಲಿ ವಿಚಾರಣೆ ಆರಂಭವಾಗಿದ್ದು, ಹಿರಿಯ ವಕೀಲ ಎ.ಎಂ. ಧರ್ ವಾದಮಂಡನೆ ಮಾಡಿದರು. ಹೊಸದಾಗಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ಸೋಮವಾರ ನಿಮ್ಮ ಅರ್ಜಿ ವಿಚಾರಣೆಗೆ ಸ್ವೀಕರಿಸುತ್ತೇವೆ ಎಂದು ಸಿಜೆ ಹೇಳಿದ್ದಾರೆ.
 
ವಕೀಲ ರಹಮತುಲ್ಲಾ ಕೊತ್ವಾಲ್ ವಾದ ಮಂಡಿಸಲಿದ್ದು, ನಿನ್ನೆ ನನ್ನ ಪಿಐಎಲ್ ವಜಾಗೊಂಡಿತ್ತು, ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದೇನೆ, ದಯಮಾಡಿ ಅದರ ವಿಚಾರಣೆ ನಡೆಸಲು ಮನವಿ ಮಾಡಿದ್ದಾರೆ. ಅದನ್ನೂ ಸೋಮವಾರ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದ್ದಾರೆ.
 
* ಮೂರು ಹೊಸ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ಹೊಸ ಅರ್ಜಿಗಳಿಗೆ 10 ನಿಮಿಷವಷ್ಟೇ ಸಮಯ ನೀಡಲಾಗುವುದು ಎಂದು ಸಿಜೆ ಹೇಳಿದ್ದಾರೆ. ದುಪಟ್ಟಾವನ್ನು ಹಿಜಾಬ್ ನಂತರ ಬಳಸಲು ಅನುಮತಿ ಕೋರಿಕೆ ಈ ಅರ್ಜಿ ಸಂಬಂಧ ವಿಚಾರಣೆ ನಡೆಸಲು ಹಿರಿಯ ವಕೀಲ ರವಿವರ್ಮಕುಮಾರ್ ಮನವಿ ಮಾಡಿಕೊಂಡಿದ್ದಾರೆ.
 
* ಇದೇ ವೇಳೆ ಯೂಟ್ಯೂಬ್ ಲೈವ್​ನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಮನವಿ ಮಾಡಿದ್ದು, ರಾಜ್ಯಾದ್ಯಾಂತ ಯೂಟ್ಯೂಬ್‌ನಿಂದ ಸಮಸ್ಯೆ ಆಗುತ್ತಿದೆ ಎಂದು ಹಿರಿಯ ವಕೀಲ ರವಿವರ್ಮಕುಮಾರ್ ಹೇಳಿದ್ದಾರೆ.
 
* 2013ರಲ್ಲೇ ಸಮವಸ್ತ್ರದ ನಿರ್ಣಯ ಅಂಗೀಕರಿಸಲಾಗಿದೆ ಎಂದು ಸರ್ಕಾರದ ಪರ ಎಜಿ ಪ್ರಭುಲಿಂಗ ನಾವದಗಿ ವಾದ ಮಂಡಿಸಿದರು. ಕಾಲೇಜು ಅಭಿವೃದ್ಧಿ ಸಮಿತಿಗೆ ಕಾನೂನಿನ ಮಾನ್ಯತೆ ಇದೆಯೇ ಎಂದು ನ್ಯಾ. ಕೃಷ್ಣ ದೀಕ್ಷಿತ್ ಪ್ರಶ್ನಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಪುನೀತ್ ಹುಟುಹಬ್ಬ ಜೇಮ್ಸ್ ಹಬ್ಬ