Webdunia - Bharat's app for daily news and videos

Install App

ವಿಸ್ತೃತ ಪೀಠಕ್ಕೆ ಹಿಜಾಬ್‌ ಪ್ರಕರಣ ವರ್ಗಾ

Webdunia
ಗುರುವಾರ, 13 ಅಕ್ಟೋಬರ್ 2022 (15:44 IST)
ಕರ್ನಾಟಕದ ಶಾಲಾ ಕಾಲೇಜುಗಳ ತರಗತಿಯೊಳಗೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್​ ನಿಷೇಧಿಸಿ ಹೈಕೋರ್ಟ್​ ನೀಡಿದ ಆದೇಶದ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್​ ಇಂದು ಪ್ರಕಟಿಸಿದೆ. ಇಬ್ಬರು ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು ಹೊರಬಿದ್ದಿದೆ. ಹೀಗಾಗಿ ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರ ಪೀಠಕ್ಕೆ ಪ್ರಕರಣ ವರ್ಗಾವಣೆಯಾಗಿದೆ. ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ಮೇಲ್ಮನವಿ ಅರ್ಜಿಯ ವಜಾ ಪರ ತೀರ್ಪು ನೀಡಿದ್ದರೆ, ನ್ಯಾಯಮೂರ್ತಿ ಸುಧಾಂಶು ಧುಲಿಯಾ ಕರ್ನಾಟಕ ಹೈಕೋರ್ಟ್​ ಆದೇಶವನ್ನು ರದ್ದು ಮಾಡುವ ಪರವಾಗಿ ತೀರ್ಪು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣವು ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿ UU ಲಲಿತ್ ಅವರ ಮುಂದೆ ಬರಲಿದೆ. ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾವಣೆಯಾಗಿದೆ. ಅಲ್ಲಿಯವರೆಗೆ ಹಿಜಾಬ್​ ವಿಚಾರದಲ್ಲಿ ಯಥಾಸ್ಥಿತಿ ಮುಂದುವರಿಯಲಿದೆ. ನ್ಯಾಯಮೂರ್ತಿಗಳು ತ್ರಿಸದಸ್ಯ ಅಥವಾ ಪಂಚ ಸದಸ್ಯ ಪೀಠ ರಚಿಸುವ ಸಾಧ್ಯತೆಗಳಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments