ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಚರ್ಚೆಯಾಗುತ್ತಿರುವ ಹಿಜಾಬ್ ವಿವಾದ ಹೈಕೋರ್ಟ್ ಮೆಟ್ಟಿಲೇರಿದೆ. ನಿನ್ನೆ ಈ ಸಂ ಬಂಧ ಹೈಕೋರ್ಟ್ನಲ್ಲಿ ವಿಚಾರಣೆ ನಡೆಸಿ, ಇಂದಿಗೆ ಮುಂದೂಡಲಾಗಿತ್ತು. ಇಂದು ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ, ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾಯಿಸಿದೆ.