Publish Date: Fri, 04 Feb 2022 (14:05 IST)
Updated Date: Fri, 04 Feb 2022 (19:11 IST)
ಉಡುಪಿ : ಕುಂದಾಪುರ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಬ್ ಮತ್ತು ಕೇಸರಿ ಶಲ್ಯ ವಿವಾದ ತಾರಕಕ್ಕೇರಿದ್ದು, ಕಾಲೇಜಿಗೆ ಶನಿವಾರ ರಜೆ ಘೋಷಿಸಲಾಗಿದೆ.
ಕಾಲೇಜಿನ ಪ್ರಾಂಶುಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ.
ಆಡಳಿತ ಮಂಡಳಿಯು ವಿದ್ಯಾರ್ಥಿಗಳನ್ನು ಕಾಲೇಜಿನ ಮೈದಾನದವರೆಗೆ ಬಿಟ್ಟುಕೊಂಡಿದೆ. ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ಕೊಡುವಂತೆ ಪ್ರಾಂಶುಪಾಲರನ್ನು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
ವಿದ್ಯಾರ್ಥಿನಿಯರ ಪೋಷಕರು ಸಹ ಕಾಲೇಜಿಗೆ ಬಂದು ಪ್ರತಿಭಟನೆ ನಡೆಸಿದ್ದರು. ತರಗತಿಗೆ ಬಿಡುವಂತೆ ಒತ್ತಾಯಿಸಿದ್ದರೂ, ತರಗತಿಗೆ ಅವಕಾಶ ಕೊಟ್ಟಿಲ್ಲ. ಇದರಿಂದ ಪೋಷಕರು ಕಾಲೇಜು ಬಳಿ ಪ್ರತಿಭಟನೆ ನಡೆಸಿದ್ದಾರೆ.