Publish Date: Fri, 03 Mar 2023 (20:32 IST)
Updated Date: Fri, 03 Mar 2023 (20:36 IST)
ಕರ್ನಾಟಕದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ತರಗತಿಯೊಳಗೆ ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಿರುವ ರಾಜ್ಯ ಸರ್ಕಾರದ ಆದೇಶದ ವಿರುದ್ಧ ವಿದ್ಯಾರ್ಥಿನಿಯರ ಸಮೂಹ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ಬರುವ ಪರೀಕ್ಷೆ ವೇಳೆ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಮನವಿ ಸಲ್ಲಿಸಿದ್ದರು. ಅದರ ವಿಚಾರಣೆಗೆ ತ್ರಿಸದಸ್ಯ ಪೀಠ ರಚಿಸಿ ಶೀಘ್ರದಲ್ಲೇ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿರುವ ಬೆನ್ನಲ್ಲೇ ಇದೇ ಮಾರ್ಚ್ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್ ಧರಿಸಿ ಬರುವಂತಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟವಾಗಿ ಹೇಳಿದ್ದಾರೆ.