Webdunia - Bharat's app for daily news and videos

Install App

ಹಿಜಬ್ : ವಿದ್ಯಾರ್ಥಿಗೆ ಕೊಲೆ ಬೆದರಿಕೆ

Webdunia
ಭಾನುವಾರ, 6 ಮಾರ್ಚ್ 2022 (10:12 IST)
ಮಂಗಳೂರು : ಹಿಜಬ್ ವಿಚಾರಕ್ಕೆ ಸಂಬಂಧಿಸಿ ನಡೆದ ಗಲಾಟೆಯಲ್ಲಿ ಎಬಿವಿಪಿ ವಿದ್ಯಾರ್ಥಿಗೆ ಕೊಲೆ ಬೆದರಿಕೆ ಹಾಕಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ರಥಬೀದಿ ದಯಾನಂದ ಪೈ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿ ಸಾಯಿ ಸಂದೇಶ್ಗೆ ಬೆದರಿಕೆ ಹಾಕಿದ್ದಾರೆ. ಹಿಜಬ್ ವಿಚಾರವಾಗಿ ಶುಕ್ರವಾರ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಪರೀಕ್ಷೆಗೆ ಹಾಜರಾಗಲು ಹಿಜಬ್ ಧರಿಸಿ ಬಂದ ವೇಳೆ ಸಾಯಿ ಸಂದೇಶ್ ಮತ್ತು ಕೆಲ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ವೇಳೆ ಸಾಯಿ ಸಂದೇಶ್ಗೆ ವಿದ್ಯಾರ್ಥಿನಿಯೊಬ್ಬರು ಕಾಲೇಜ್ ನಿನ್ನ ಅಪ್ಪಂದಾ ಎಂದು ಪ್ರಶ್ನಿಸಿದ್ದರು. ಈ ವೀಡಿಯೋ ಸಾಮಾಜಿಕ  ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಈ ಬೆನ್ನಲ್ಲೇ ಎಬಿವಿಪಿ ವಿದ್ಯಾರ್ಥಿ ಸಾಯಿ ಸಂದೇಶ್ಗೆ ಕೊಲೆ ಬೆದರಿಕೆಗಳು ಬಂದಿವೆ. 

ವಿದೇಶಿ ಕಾಲ್, ಇನ್ಸ್ಟಾಗ್ರಾಮ್, ವಾಟ್ಸ್ಆಪ್ ಮೂಲಕ ಹತ್ತಾರು ಬೆದರಿಕೆ ಕರೆಗಳು ಬಂದಿವೆ. ನಿನ್ನ ಫುಲ್ ವಿವರ ಸಿಕ್ಕಿದೆ, ಎಲ್ಲಿಂದ ಬರ್ತೀಯಾ, ಎಲ್ಲಿಂದ ಹೋಗ್ತೀಯಾ ಎಂದು ನಮಗೆ ತಿಳಿದಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments