Select Your Language

Notifications

webdunia
webdunia
webdunia
webdunia

ಎಕ್ಸಾಂ ಕೆಲಸ ಮಾಡೋ ಶಿಕ್ಷಕರಿಗೆ ಹಿಜಬ್ ನಿಷೇಧ?

ಎಕ್ಸಾಂ ಕೆಲಸ ಮಾಡೋ ಶಿಕ್ಷಕರಿಗೆ ಹಿಜಬ್ ನಿಷೇಧ?
ಬೆಂಗಳೂರು , ಸೋಮವಾರ, 4 ಏಪ್ರಿಲ್ 2022 (13:21 IST)
ಬೆಂಗಳೂರು : ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆ ಸಮಯದಲ್ಲಿ ಮೇಲ್ವಿಚಾರಕರಾಗಿ ಕೆಲಸ ಮಾಡುವ ಉಪನ್ಯಾಸಕರು ಹಿಜಬ್ ಧರಿಸಿ ಹಾಜರಾಗುವಂತಿಲ್ಲ ಎಂದು ಶಿಕ್ಷಣ ಇಲಾಖೆ ಮೌಖಿಕ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ.

ಪರೀಕ್ಷಾ ಸಮಯದಲ್ಲಿ ಮೇಲ್ವಿಚಾರಕರಾಗಿ ಕೆಲಸ ಮಾಡುವ ಉಪನ್ಯಾಸಕರಿಗೆ ಸದ್ಯ ಯಾವುದೇ ಡ್ರೆಸ್ ಕೋಡ್ ಅನ್ನು ನೀಡಲಾಗಿಲ್ಲ. ಆದರೂ ಪರೀಕ್ಷಾ ಕೇಂದ್ರಗಳಲ್ಲಿ ಗೊಂದಲ ಉಂಟಾಗಬಾರದೆಂಬ ಕಾರಣಕ್ಕೆ ಶಿಕ್ಷಣ ಇಲಾಖೆ ಈ ನಿರ್ಧಾರಕ್ಕೆ ಬಂದಿದೆ.

ಉಪನ್ಯಾಸಕರು ಹಿಜಬ್ ತೆಗೆದು ಪರೀಕ್ಷಾ ಕೆಲಸಕ್ಕೆ ಹಾಜರಾದರೆ ಮಾತ್ರವೇ ಅವರಿಗೆ ಕೆಲಸಕ್ಕೆ ಅವಕಾಶ ನೀಡಬೇಕು. ಒಂದು ವೇಳೆ ಉಪನ್ಯಾಸಕರು ಹಿಜಬ್ ತೆಗೆಯದೇ ಬಂದಲ್ಲಿ ಅವರನ್ನು ಕೆಲಸದಿಂದ ಬಿಡುಗಡೆಗೊಳಿಸಲು ಇಲಾಖೆ ನಿರ್ಧರಿಸಿದೆ. 

ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾದ ಮೊದಲ ದಿನ ಶಿಕ್ಷಕಿಯೊಬ್ಬರು ಹಿಜಬ್ ಧರಿಸಿ ಬಂದಿದ್ದ ಘಟನೆ ನಡೆದಿತ್ತು. ಆ ಸಂದರ್ಭ ಶಿಕ್ಷಕಿಯನ್ನು ಕೆಲಸದಿಂದ ಬಿಡುಗಡೆ ಮಾಡಲಾಗಿತ್ತು. ಮುಂದೆಯೂ ಈ ರೀತಿ ನಡೆದಲ್ಲಿ ಇದೇ ನಿಯಮ ಮುಂದುವರಿಸುವಂತೆ ತಿಳಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಸೀದಿ ಸೌಂಡ್ ಬ್ಯಾನ್ ಅಭಿಯಾನ!