Select Your Language

Notifications

webdunia
webdunia
webdunia
webdunia

ಹಿಜಾಬ್-ಕೇಸರಿ ಶಾಲು ವಿವಾದ: ಮಾಜಿ ಪ್ರಧಾನಿ ಹೇಳಿದ್ದೇನು.?

ಹಿಜಾಬ್-ಕೇಸರಿ ಶಾಲು ವಿವಾದ: ಮಾಜಿ ಪ್ರಧಾನಿ ಹೇಳಿದ್ದೇನು.?
bangalore , ಮಂಗಳವಾರ, 8 ಫೆಬ್ರವರಿ 2022 (20:53 IST)
ಬೆಂಗಳೂರು: ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ಈ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಪ್ರತಿಕ್ರಿಯಿಸಿದ್ದು,’2023ರ ವಿಧಾನಸಭಾ ಚುನಾವಣೆಗೆ ಕರ್ನಾಟಕದ ರಾಜಕೀಯ ಪಕ್ಷಗಳು ಹಿಜಾಬ್ ವಿಷಯದ ಲಾಭ ಪಡೆಯುತ್ತಿವೆ’ ಎಂದು ಹೇಳಿದ್ದಾರೆ.
‘ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ಕೆಲವು ಅಂಶಗಳು ಕೂಡ ಇದರಲ್ಲಿದ್ದು, ರಾಜಕೀಯ ಪಕ್ಷಗಳು 2023ರ ಚುನಾವಣೆಗಳ ಲಾಭವನ್ನು ಪಡೆಯುತ್ತಿವೆ. ಸರ್ಕಾರ ಇದನ್ನು ನಿಲ್ಲಿಸಬಹುದು. ಇಂತಹ ವಿಷಯಗಳು ದೇಶವನ್ನು ವಿಭಜಿಸುತ್ತವೆ’ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಪ್ರತಿಕ್ರಿಯಿಸಿದ್ದಾರೆ.
ಇನ್ನು, ಹಿಜಾಬ್-ಕೇಸರಿ ಶಾಲು ವಿವಾದ ರಾಜ್ಯದಾತ್ಯಂತ ತಾರಕಕ್ಕೇರಿದ್ದು,ಶಿವಮೊಗ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಧ್ವಜ ಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಲಾಗಿದ್ದು,ಕಾಲೇಜಿನಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ಅಲ್ಲದೆ ಜಾಬ್ ನಲ್ಲಿ ಬಂದ ವಿದ್ಯಾರ್ಥಿನಿಯರು ಮತ್ತು ಕೇಸರಿ ಶಾಲು ಹಾಕಿ ಬಂದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿದ್ದರಿಂದ ಉಡುಪಿಯ ಎಂಜಿಎಂ ಕಾಲೇಜಿನ ಹೊರಗಡೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಕಾಲೇಜಿಗೆ 1 ದಿನ ರಜೆ ಘೋಷಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅನ್ನದಾತರಿಗೆ ಗುಡ್ ನ್ಯೂಸ್ : ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣಕ್ಕೆ ಅರ್ಜಿ ಆಹ್ವಾನ