Publish Date: Fri, 18 Feb 2022 (12:17 IST)
Updated Date: Fri, 18 Feb 2022 (11:54 IST)
ಶಿವಮೊಗ್ಗ : ಜಿಲ್ಲೆಯಲ್ಲಿ ನಿನ್ನೆ ಕೆಲ ವಿದ್ಯಾರ್ಥಿನಿಯರು ನಮಗೆ ಪರೀಕ್ಷೆ ಮುಖ್ಯವಲ್ಲ,
ಹಿಜಬ್ ಮುಖ್ಯ ಎಂದು ಹೇಳಿ ತರಗತಿಯಿಂದ ಹೋರಟಿದ್ದ ಹಿಜಬ್ ವಿವಾದ ಇಂದು ಸಹ ಮುಂದುವರಿದಿದ್ದು, ಇಬ್ಬರು ವಿದ್ಯಾರ್ಥಿನಿಯರು ತರಗತಿಯನ್ನು ಬಹಿಷ್ಕರಿಸಿದ್ದಾರೆ.
ಶಿವಮೊಗ್ಗದ ಬಿ.ಎಚ್.ರಸ್ತೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದು ಸಹ 10 ನೇ ತರಗತಿಗೆ ತಾಲೂಕು ಮಟ್ಟದ ಪೂರ್ವಭಾವಿ ಸಿದ್ಧತಾ ಪರೀಕ್ಷೆ ಇತ್ತು. ವಿಜ್ಞಾನ ಪರೀಕ್ಷೆ ನಡೆಯುತ್ತಿದೆ. ಹಿಜಬ್, ಬುರ್ಖಾ ಧರಿಸಿ 9 ಹಾಗೂ 10ನೇ ತರಗತಿ ವಿದ್ಯಾರ್ಥಿನಿ ಬಂದಿದ್ದರು.
ಆದರೆ ಹಿಜಬ್, ಬುರ್ಖಾ ಧರಿಸಿ ತರಗತಿಯಲ್ಲಿ ಕುಳಿತುಕೊಳ್ಳಲು ಶಿಕ್ಷಕರ ನಿರಾಕರಣೆ ಮಾಡಿದರು. ಇದರಿಂದಾಗಿ ವಿದ್ಯಾರ್ಥಿನಿಯರು ಶಾಲೆಯಿಂದ ಹೊರಗೆ ಹೋಗಿದ್ದಾರೆ.