Select Your Language

Notifications

webdunia
webdunia
webdunia
webdunia

ಜನ ಸಾಮಾನ್ಯರಿಗೆ ಬಿಗ್ ಶಾಕ್

LPG gas cylinder
bangalore , ಗುರುವಾರ, 1 ಜುಲೈ 2021 (15:39 IST)
ನವದೆಹಲಿ: ಒಂದು ತಿಂಗಳ ಅಂತರದಲ್ಲಿ ನಾಲ್ಕು ಬಾರಿ ದರ ಏರಿಕಯಾಗಿದೆ. ನಾಲ್ಕು ದಿನಗಳ ಹಿಂದೆ  ಎಲ್ ಪಿ ಜಿ ಸಿಲಿಂಡರ್ ದರ ಪರಿಷ್ಕರಿಸಲಾಗಿದೆ. ಮೂರು ದಿನಗಳ ಹಿಂದೆ ಗೃಹಬಳಕೆಯ ಸಿಲಿಂಡರ್ ಬೆಲೆ 25 ರು ಏರಿಕೆಯಾಗಿತ್ತು.

ಫೆಬ್ರವರಿ ತಿಂಗಳಲ್ಲಿ 100 ರು ಏರಿಕೆ ಮಾಡಲಾಗಿತ್ತು. ಫೆಬ್ರವರಿ 4, ಫೆ.14 ಹಾಗೂ ಫೆ.25ರಂದು ಎಲ್ ಪಿಜಿ ಸಿಲಿಂಡರ್ ದರ ಏರಿಕೆ ಮಾಡಲಾಗಿತ್ತು. ಡಿಸೆಂಬರ್ ತಿಂಗಳಿನಿಂದ 200 ರು ಪ್ರತಿ ಸಿಲಿಂಡರ್ ನಂತೆ ಏರಿಕೆ ಕಾಣಲಾಗಿದೆ.
 
ದೆಹಲಿಯಲ್ಲಿ 14.2 ಕೆ.ಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ 794 ರೂಪಾಯಿಂದ  819ರೂಪಾಯಿಗೆ ಏರಿಕೆಯಾಗಿದೆ.  ಇಂದಿನಿಂದ ವಿವಿಧ ನಗರದಲ್ಲಿ ಬೆಲೆಗಳು ದೆಹಲಿ  819,  ಬೆಂಗಳೂರು: 822, ಮುಂಬೈ: 819, ಕೋಲ್ಕತಾ: 845.50 ,  ಚೆನ್ನೈ: 835,
 
ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್ ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ಡಿಸಿಎಂ