Publish Date: Fri, 29 Dec 2017 (09:32 IST)
Updated Date: Fri, 29 Dec 2017 (09:35 IST)
ಮಂಗಳೂರು: ಹೊಸ ವರ್ಷಾಚರಣೆ ನೆಪದಲ್ಲಿ ನಡೆಸುವ ಮಧ್ಯರಾತ್ರಿ ಪಾರ್ಟಿಗಳಲ್ಲಿ ಸೆಕ್ಸ್ ಮತ್ತು ಡ್ರಗ್ಸ್ ದಂಧೆಗೆ ಪ್ರೇರೇಪಿಸುವುದೇ ಮುಖ್ಯ ಉದ್ದೇಶವಾಗಿರುತ್ತದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿದೆ.
ಆದರೆ ಹಿಂದೂ ಸಂಘಟನೆಗಳ ಆರೋಪಕ್ಕೆ ಕಿಡಿಕಾರಿರುವ ಗೃಹ ಸಚಿವ ರಾಮಲಿಂಗಾ ರೆಡ್ಡಿ ಭಜರಂಗ ದಳ ಮತ್ತು ಶ್ರೀರಾಮ ಸೇನೆಯಂತಹ ಸಂಘಟನೆಗಳಿಗೆ ಹೀಗೆ ನಿರ್ಧರಿಸುವ ಹಕ್ಕಿಲ್ಲ. ಪ್ರತೀ ವರ್ಷವೂ ಇವರು ಇದೇ ರೀತಿ ಆರೋಪ ಮಾಡುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.
ಇತ್ತೀಚೆಗಷ್ಟೇ ಸ್ವತಃ ಗೃಹ ಸಚಿವ ರಾಮಲಿಂಗಾ ರೆಡ್ಡಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಸಂದರ್ಭ ನಡೆಯಲಿದ್ದ ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ಭದ್ರತೆ ನೆಪದಲ್ಲಿ ಅನುಮತಿ ನಿರಾಕರಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ