Select Your Language

Notifications

webdunia
webdunia
webdunia
webdunia

ಹಿಂದೂ ಯುವತಿ ಬರ್ಬರ ಹತ್ಯೆ, ಮುಸ್ಲಿಂ ಯುವನ ಬಂಧನ: ಕಿಚ್ಚುಹಚ್ಚಿದ ಜಸ್ಟೀಸ್ ಫಾರ್ ಸ್ವಾತಿ ಅಭಿಯಾನ

Justice for Swathi campaign

Sampriya

ಹಾವೇರಿ , ಶುಕ್ರವಾರ, 14 ಮಾರ್ಚ್ 2025 (14:50 IST)
Photo Courtesy X
ಹಾವೇರಿ: ರಾಣೇಬೆನ್ನೂರು ತಾಲೂಕಿನ ಪತ್ತೇಪುರ ಗ್ರಾಮದ ತುಂಗಭದ್ರಾ ನದಿ ಬಳಿ ಮಾರ್ಚ್‌ 6ರಂದು ಯುವತಿಯ ಮೃತದೇಹ ಪತ್ತೆಯಾಗಿತ್ತು. ಮೊದಲು ಅಪರಿಚಿತ ಯುವತಿಯ ಶವ ಎಂದು ಹಲಗೇರಿ ಪೊಲೀಸರು ಘೋಷಿಸಿದ್ದರು. ಇದೀಗ  ಈ ಪ್ರಕರಣ ದೊಡ್ಡ ತಿರುವು ಪಡೆದಿದೆ.

ರಾಣೆಬೆನ್ನೂರಿನ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಹಿಂದೂ ಯುವತಿಯ ಶವ ಇದಾಗಿದ್ದು, ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿ ಎಸೆದಿರುವುದು ಪೊಲೀಸ್‌ ತನಿಖೆಯಿಂದ ಬರಲಾಗಿದೆ. ಈ ಸಂಬಂಧ ಮುಸ್ಲಿಂ ಯುವಕ ನಯಾಜ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ರಮೇಶ್ ಬ್ಯಾಡಗಿ (22) ಮೃತ ಯುವತಿ. ಮಾ.6 ರಂದು ಆಕೆಯ ಶವ ನದಿ ಬಳಿ ಪತ್ತೆಯಾಗಿತ್ತು. ಗುರುತು ಪತ್ತೆಯಾಗದ ಕಾರಣ ವಾರಸುದಾರರು ಯಾರೂ ಇಲ್ಲದೆ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಹೂತು ಹಾಕಲಾಗಿತ್ತು. ಮರಣೋತ್ತರ ಪರೀಕ್ಷೆ ವೇಳೆ ಆಕೆಯನ್ನು ಹತ್ಯೆಯಾಗಿರುವುದು ದೃಢಪಟ್ಟಿದೆ.

ನಂತರದಲ್ಲಿ ಹಲಗೇರಿ ಪೊಲೀಸರು ತನಿಖೆ ಚುರುಕುಗೊಳಿಸಿದರು. ಮಾರ್ಚ್‌ 3 ರಂದು ಕಾಣೆಯಾಗಿದ್ದ ಸ್ವಾತಿಯ ಗುರುತನ್ನು ಪತ್ತೆಹಚ್ಚಿದ್ದರು. ಸ್ವಾತಿ ಪೋಷಕರು ಹಿರೇಕೇರೂರು ಪೊಲೀಸ್ ಠಾಣೆಯಲ್ಲಿ ಆಕೆ ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದರು.

ಸ್ವಾತಿ ತಂದೆ ಮೃತಪಟ್ಟಿದ್ದು, ತಾಯಿ ಜೊತೆ ವಾಸವಿದ್ದರು. ಯುವತಿ ಸಾವಿನ ಸಂಬಂಧ ಮೂವರ ಮೇಲೆ ಶಂಕೆ ವ್ಯಕ್ತವಾಗಿದ್ದು, ತನಿಖೆಯನ್ನು ಹಲಗೇರಿ ಪೊಲೀಸರು ತೀವ್ರಗೊಳಿಸಿದ್ದಾರೆ. ಹಿಂದೂ ಸಂಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ಜಸ್ಟೀಸ್ ಫಾರ್ ಸ್ವಾತಿ ಅಭಿಯಾನ ಆರಂಭಿಸಿದ್ದು, ಹಂತಕರನ್ನು ಪತ್ತೆ ಹಚ್ಚಿ, ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಒಂದು ದೇಶ, ಒಂದು ಚುನಾವಣೆ ಮಾಡುವುದರಿಂದ ಖರ್ಚು ಕಡಿಮೆಯಾಗುತ್ತದೆ: ಅಣ್ಣಾಮಲೈ