ಚಿಕ್ಕಮಗಳೂರು: ಹಿಂದೂಗಳ ಮನೆ ಮೇಲೆ ಅನ್ಯಕೋಮಿನವರು ಕಲ್ಲು ಎಸೆದು ಹಾನಿ ಮಾಡಿದ್ದಾರೆ ಎಂಬ ಆರೋಪ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಕೇಳಿಬಂದಿದೆ.
ಚಿಕ್ಕಮಗಳೂರಿನ ವಿಜಯಪುರ ಬಡಾವಣೆಯಲ್ಲಿರುವ ಕೆಲವು ಹಿಂದೂಗಳ ಮನೆ ಕಿಟಿಕಿ ಗಾಜುಗಳನ್ನು ಕಲ್ಲು ಎಸೆದು ಧ್ವಂಸ ಮಾಡಲಾಗಿದೆ. ಶುಕ್ರವಾರದ ಪ್ರಾರ್ಥನೆ ಮುಗಿಸಿ ತೆರಳುವಾಗ ಅನ್ಯಕೋಮಿನವರು ಈ ಕೃತ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಕಲ್ಲು ತೂರಾಟ ನಡೆಸಿದ್ದಲ್ಲದೆ, ಘೋಷಣೆಗಳನ್ನೂ ಕೂಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಮನೆ ಹಾನಿಗೀಡಾಗಿರುವ ಮಾಲಿಕ ಮಹೇಶ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿ ಕೃತ್ಯವೆಸಗಿದ ಕಿಡಿಗೇಡಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.