ಗುರುವಾರದಿಂದ ಹಿಂಗಾರು ಪ್ರವೇಶ

Webdunia
ಮಂಗಳವಾರ, 19 ಅಕ್ಟೋಬರ್ 2021 (21:52 IST)
ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರಿನ ಅಬ್ಬರ ಕಡಿಮೆಯಾಗಿದ್ದು ಅ 21(ಗುರುವಾರ) ಕ್ಕೆ ರಾಜ್ಯಕ್ಕೆ ಹಿಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
 
ಮುಂಗಾರು ಚುರುಕುಗೊಂಡಿದ್ದರಿಂದ ರಾಜ್ಯದಲ್ಲಿ ಒಂದು ವಾರದಿಂದ ಎಡ ಬಿಡದೇ ಮಳೆ ಬಂದಿತ್ತು. ಸದ್ಯ ಮುಂದಿನ ಎರಡು ದಿನಗಳವರೆಗೆ ರಾಜ್ಯದಲ್ಲಿ ಮಳೆಯಾಗುವ ಸಂಭವ ಕಡಿಮೆ ಎಂದು ಹೇಳಿದೆ.
 
ಅ 21 ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮತ್ತೆ ಮಳೆ ಪ್ರಮಾಣ ಹೆಚ್ಚಲಿದ್ದು, ಹಿಂಗಾರು ಮಳೆ ಪ್ರವೇಶದ ಲಕ್ಷಣಗಳು ಕಂಡುಬಂದಿವೆ ಎಂದು ಮಾಹಿತಿ ನೀಡಿದೆ.
 
ಯೆಲ್ಲೊ ಅಲರ್ಟ್: 
 
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.
 
ಮಳೆ ಪ್ರಮಾಣ: 
 
ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಸೋಮವಾರ 5 ಸೆಂ ಮೀ, ಕಾರ್ಕಳ, ಅಂಕೋಲಾ, ಚಿಕ್ಕಮಗಳೂರು, ಹರಪನಹಳ್ಳಿ, ತಿಪಟೂರು, ಕುಣಿಗಲ್‌ನಲ್ಲಿ ತಲಾ 1 ಸೆಂ ಮೀ ಮಳೆಯಾಗಿದೆ ಎಂದು ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಶಬರಿಮಲೆಯಲ್ಲಿ ಕನ್ನಡಿಗರ ವಾಹನ ತಡೆದು ಕೇರಳ ಉದ್ಧಟತನ: ಜೆಡಿಎಸ್ ಆಕ್ರೋಶ

ಮುಂದಿನ ಸುದ್ದಿ
Show comments