Select Your Language

Notifications

webdunia
webdunia
webdunia
webdunia

ಟ್ಯಾಟೂನಿಂದ ಎಚ್‌ಐವಿ, ಚರ್ಮದ ಕ್ಯಾನ್ಸರ್‌: ಕೇಂದ್ರದ ಜತೆಗೆ ಚರ್ಚೆ ಎಂದ ದಿನೇಶ್ ಗುಂಡೂರಾವ್

ಟ್ಯಾಟೂನಿಂದ ಎಚ್‌ಐವಿ, ಚರ್ಮದ ಕ್ಯಾನ್ಸರ್‌: ಕೇಂದ್ರದ ಜತೆಗೆ ಚರ್ಚೆ ಎಂದ ದಿನೇಶ್ ಗುಂಡೂರಾವ್

Sampriya

ಬೆಂಗಳೂರು , ಶುಕ್ರವಾರ, 28 ಫೆಬ್ರವರಿ 2025 (15:47 IST)
ಬೆಂಗಳೂರು: ಇಡ್ಲಿಯಲ್ಲಿ ಕ್ಯಾನ್ಸರ್​ಕಾರಕ ಅಂಶ ಪತ್ತೆ ಬೆನ್ನಲ್ಲೇ ಇದೀಗ ಟ್ಯಾಟೂನಿಂದ ಎಚ್​ಐವಿ ಹಾಗೂ ಚರ್ಮದ ಕ್ಯಾನ್ಸರ್ ಬರುವ ಸಾಧ್ಯತೆಗಳ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು.

ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಇಲಾಖೆಯ ಆಯುಕ್ತ ಶ್ರೀನಿವಾಸ್ ನೇತ್ವದಲ್ಲಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಟ್ಯಾಟೂನಿಂದಾಗಿ ಕಾಣಿಸಿಕೊಳ್ಳುವ ಆರೋಗ್ಯ ಸಮಸ್ಯೆ ಬಗ್ಗೆ ಕೇಂದ್ರ ಸರ್ಕಾರ ನಿಯಮ ರೂಪಿಸಲು ಅವಕಾಶ ಇದೆ. ಟ್ಯಾಟೂ ಇಂಕ್ ಕಾಂತಿ ವರ್ಧಕಗಳ ಅಡಿಯಲ್ಲಿ ತರಲು ಪತ್ರ ಬರೆಯಲಾಗುವುದು. ಆಯುಕ್ತರಿಗೆ ಪತ್ರ ಬರೆದು ಮನವಿಗೆ ಸೂಚನೆ ನೀಡಲಾಗಿದೆ. ಹೀಗಾಗಿ ಪತ್ರ ಬರೆದು ಕಾನೂನು ರೂಪಿಸಲು ಮುಂದಾಗಿದ್ದೇವೆ ಎಂದು ತಿಳಿಸಿದರು.

ಇನ್ನೂ 3608 ಆಹಾರ ಪದಾರ್ಥಗಳ ಮಾದರಿ ಸಂಗ್ರಹಿಸಲಾಗಿದೆ. ಈ ಆಹಾರಗಳ ಪೈಕಿ 26 ಮಾದರಿಗಳು ಅಸುರಕ್ಷಿತವಾಗಿವೆ ಎಂಬುದು ತಿಳಿದುಬಂದಿದೆ. 28 ಕಳಪೆಯಾಗಿವೆ. ಇದೇ ಜನವರಿಯಲ್ಲಿ 681 ರಷ್ಟು ಇಡ್ಲಿ ಸ್ಯಾಂಪಲ್ಸ್ ಪಡೆಯಲಾಗಿದೆ. ಇಡ್ಲಿ ಮಾಡುವಾಗ ಪ್ಲಾಸ್ಟಿಕ್ ಬಳಸುತ್ತಿರುವುದು ಗಮನಕ್ಕೆ ಬಂದಿದೆ. ಘಟನೆ ಸಂಬಂಧ 52 ಆಹಾರ ಉತ್ಪಾದಕರಿಗೆ ನೋಟಿಸ್ ನೀಡಲಾಗಿದೆ. ಪ್ಲಾಸ್ಟಿಕ್ ಬಳಕೆ ಮಾಡದಂತೆ ಈಗಾಗಲೇ ನಾವು ಎಚ್ಚರಿಕೆ ನೀಡಿದ್ದೇವೆ ಎಂದು ಗುಂಡೂರಾವ್ ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಕುಂಭಮೇಳದಲ್ಲಿ ಪಾಲ್ಗೊಳ್ಳದ ಭಕ್ತರಿಗೆ ಗುಡ್‌ನ್ಯೂಸ್‌: ಮನೆ ಬಾಗಿಲಿಗೆ ಬರಲಿದೆ ‌ಸಂಗಮ ಜಲ