ಸ್ವ ಇಚ್ಛೆಯಿಂದ ಜನ ಗ್ಯಾರಂಟಿ ಬಿಟ್ಟುಕೊಡಲಿ ಎಂದ ರೇವಣ್ಣ: ನೀವು ಸರ್ಕಾರಿ ಸವಲತ್ತು ಬಿಡ್ತೀರಾ ಎಂದ ಜನ

Krishnaveni K
ಬುಧವಾರ, 5 ಮಾರ್ಚ್ 2025 (16:31 IST)
Photo Credit: X
ಬೆಂಗಳೂರು: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಉಳ್ಳವರು ಸ್ವ ಇಚ್ಛೆಯಿಂದ ಬಿಟ್ಟುಕೊಡಲಿ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ ರೇವಣ್ಣಗೆ ನೆಟ್ಟಿಗರು ನೀವು ಸರ್ಕಾರೀ ಸವಲತ್ತುಗಳನ್ನು ಬಿಡ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ.

ಗ್ಯಾರಂಟಿ ಯೋಜನೆಗಳು ಇತ್ತೀಚೆಗೆ ಸರ್ಕಾರಕ್ಕೆ ಹೊರೆಯಾಗಿ ಪರಿಣಮಿಸುತ್ತಿದೆ ಎನ್ನುವುದು ಗುಟ್ಟಾಗಿ ಉಳಿದಿಲ್ಲ. ಹಾಗಿದ್ದರೂ ಕೊಟ್ಟ ಮಾತಿನಂತೇ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಿಕೊಂಡೇ ಹೋಗಬೇಕಾದ ಅನಿವಾರ್ಯತೆ ಸರ್ಕಾರದ್ದಾಗಿದೆ.

ಈ ನಡುವೆ ಕೆಲವು ಶ್ರೀಮಂತರೂ ಉಚಿತ ಬಸ್ ಪ್ರಯಾಣ, ಗೃಹಲಕ್ಷ್ಮಿ ಯೋಜನೆ ಲಾಭ ಪಡೆದುಕೊಳ್ಳುತ್ತಿರುವುದರ ಬಗ್ಗೆ ಎಚ್.ಎಂ. ರೇವಣ್ಣ ಆಕ್ಷೇಪ ವ್ಯಕ್ತಪಡಿಸಿದ್ದು, ಉಳ್ಳವರು ಗ್ಯಾರಂಟಿಯನ್ನು ತಾವಾಗಿಯೇ ಬಿಟ್ಟುಕೊಡಲಿ ಎಂದಿದ್ದಾರೆ.

ಇದಕ್ಕೆ ಈಗ ಸೋಷಿಯಲ್ ಮೀಡಿಯಾದಲ್ಲಿ ಕೆಲವರು ಹಾಗಿದ್ದರೆ ನೀವೂ ಸರ್ಕಾರ ನೀಡುವ ಕಾರು, ಬಂಗಲೆ, ಆಳು-ಕಾಳು ಸವಲತ್ತುಗಳನ್ನು ಬಿಟ್ಟುಕೊಡ್ತೀರಾ? ಮೊದಲು ನೀವು ಬಿಟ್ಟುಕೊಡಿ. ಆಗ ಜನರೂ ಬಿಟ್ಟುಕೊಡುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾರಂತ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಿವರ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ಮುಂದಿನ ಸುದ್ದಿ
Show comments