Webdunia - Bharat's app for daily news and videos

Install App

HMPV ವೈರಸ್ ಸೋಂಕು: ಸರ್ಕಾರಕ್ಕೆ ಆರ್ ಅಶೋಕ್‌ ಸಲಹೆ

Sampriya
ಮಂಗಳವಾರ, 7 ಜನವರಿ 2025 (19:52 IST)
Photo Courtesy X
ಬೆಂಗಳೂರಿನಲ್ಲಿ ಇಬ್ಬರು ಶಿಶುಗಳಿಗೆ HMPV ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನಲೆಯಲ್ಲಿ ರಾಜ್ಯದ ಜನರಲ್ಲಿ ಆತಂಕ ಮನೆಮಾಡಿದ್ದು, ಸರ್ಕಾರ ಇದನ್ನ ಅತ್ಯಂತ ಗಂಬೀರವಾಗಿ ಪರಿಗಣಿಸಬೇಕು.

ಕಳೆದ ಐದಾರು ತಿಂಗಳುಗಳಿಂದ ನಿರಂತರವಾಗಿ ಸಂಭವಿಸುತ್ತಿರುವ ಬಾಣಂತಿ ಮಹಿಳೆಯರು ಮತ್ತು ನವಜಾತ ಶಿಶುಗಳ ಸರಣಿ ಸಾವನ್ನ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಕಾಂಗ್ರೆಸ್ ಸರ್ಕಾರ, HMPV ವೈರಾಣು ಸೋಂಕು ಹರಡುವುದನ್ನು ನಿಯಂತ್ರಣ ಮಾಡಲು ಸಮರ್ಥವೇ ಎಂಬ ಅನುಮಾನ ಸಹಜವಾಗಿ ಸಾರ್ವಜನಿಕರಲ್ಲಿ ಮೂಡಿದೆ.

ಈ ನಿಟ್ಟಿನಲ್ಲಿ ವಿಪಕ್ಷ ನಾಯಕನಾಗಿ ಸರ್ಕಾರಕ್ಕೆ ನನ್ನ ಸಲಹೆಗಳು:

1.) ಕೇವಲ ಕಾಟಾಚಾರಕ್ಕೆ ಸಭೆಗಳನ್ನು ಮಾಡಿ, ಮಾರ್ಗಸೂಚಿ ಬಿಡುಗಡೆ ಮಾಡಿದರೆ ಸಾಲದು. ಸರ್ಕಾರ
ಈ ಕೂಡಲೇ ಸಮರ್ಥ ಸಚಿವರನ್ನು ಒಳಗೊಂಡ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು.

2.) ಸರ್ಕಾರಕ್ಕೆ ಮತ್ತು ಟಾಸ್ಕ್ ಫೋರ್ಸ್ ಗೆ ತಾಂತ್ರಿಕ ಮಾರ್ಗದರ್ಶನ ನೀಡಲು ಒಂದು ತಜ್ಞರ ವೈದ್ಯರ ಸಮಿತಿ ರಚನೆ ಮಾಡಬೇಕು.

3.) ಸಣ್ಣ ಮಕ್ಕಳು, ಹಿರಿಯ ನಾಗರಿಕರು, ರೋಗನಿರೋಧಕ ಶಕ್ತಿ ಕಡಿಮೆ ಇರುವವರು, ಈಗಾಗಲೇ ಶ್ವಾಸಕೋಶ ಸಮಸ್ಯೆಗಳಿಂದ ಬಳಲುತ್ತಿರುವವರ ಸಮೀಕ್ಷೆ ನಡೆಸಿ ಅಗತ್ಯವಿದ್ದವರಿಗೆ ಪರೀಕ್ಷೆ ಮಾಡಿಸಬೇಕು.

4.) ಅಂತಹವರು ಪಾಲಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಬೇಕು.

5.) ತಾಲ್ಲೂಕು ಆಸ್ಪತ್ರೆಗಳಲ್ಲಿ, ಜಿಲ್ಲಾಸ್ಪತ್ರೆಗಳಲ್ಲಿ, ವಿಶೇಷವಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳಲ್ಲಿ, ಸೋಂಕು ತಗುಲಿದವರ ಚಿಕಿತ್ಸೆಗೆ ಅಗತ್ಯ ಇರುವ ಔಷಧಿ, ಆಕ್ಸಿಜನ್, ಐಸಿಯು ಬೆಡ್ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆಗಳು ಇದೆಯೇ ಎಂದು ಜಿಲ್ಲಾ ಉಸ್ತುವಾರಿ ಸಚಿವರುಗಳು, ಆರೋಗ್ಯ ಸಚಿವರು ಆಸ್ಪತ್ರೆಗಳಿಗೆ ಖುದ್ದು ಭೇಟಿ ನೀಡಿ ಖಾತ್ರಿ ಪಡಿಸಿಕೊಳ್ಳಬೇಕು.

6.) ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಮೀಸಲಿಡಲು ಕ್ರಮ ಕೈಗೊಳ್ಳಬೇಕು.

7.) ರಾಜ್ಯಾದ್ಯಂತ ಹೆಚ್ಚುವರಿ ಆಂಬುಲೆನ್ಸ್ ಗಳ ವ್ಯವಸ್ಥೆ ಮಾಡಬೇಕು.

8.) ಶಾಲೆಗಳಲ್ಲಿ ಮಕ್ಕಳ ಮೇಲೆ ವಿಶೇಷ ನಿಗಾ ಇಡಲು ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಬೇಕು.

9.) ಸೋಂಕು ಹರಡುವಿಕೆಯ ಸ್ಥಿತಿಗತಿ ಬಗ್ಗೆ ಪಾರದರ್ಶಕ ಮಾಹಿತಿ ನೀಡಲು ಪ್ರತಿನಿತ್ಯ ಆರೋಗ್ಯ ಇಲಾಖೆ ವತಿಯಿಂದ ಅಧಿಕೃತ ಬುಲೆಟಿನ್ ಬಿಡುಗಡೆ ಮಾಡಬೇಕು.

10.) ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ಯಾವುದೇ ರೀತಿಯ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಮುಂದಾಲೋಚನೆ ಮಾಡಿ ಎಲ್ಲ ರೀತಿಯಲ್ಲೂ ಸನ್ನದ್ಧವಾಗಿರಬೇಕು.

ಬಾಣಂತಿಯರ ಸರಣಿ ಸಾವಿನಲ್ಲಿ ಆಗುತ್ತಿರುವ ನಿರ್ಲಕ್ಷ್ಯ, ಎಡವಟ್ಟುಗಳು #HMPV ವೈರಾಣು ಸೋಂಕು ನಿಯಂತ್ರಣದಲ್ಲಿ ಆಗದಂತೆ ಎಲ್ಲ ರೀತಿಯಲ್ಲೂ ಮುನ್ನೆಚ್ಚರಿಕೆ ವಹಿಸಲು ಸಿಎಂ @siddaramaiah
 ಅವರು ಸಚಿವರಿಗೆ ಮತ್ತು ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ  ನೀಡಬೇಕು. ಇದು ಸರ್ಕಾರಕ್ಕೆ ನನ್ನ ಆಗ್ರಹ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments