ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಸತತ ಭಾರೀ ಮಳೆಯಿಂದಾಗಿ ಚೆನ್ನೈನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಚೆನ್ನೈ, ಚೆಂಗಲ್ಪಟ್ಟು, ತಿರುವಳ್ಳೂರು, ಕಾಂಚೀಪುರಂ ಜಿಲ್ಲೆಗಳು ಮತ್ತು ವಿಲ್ಲುಪುರಂ ಮತ್ತು ಕಡಲೂರು ಜಿಲ್ಲೆಗಳ ಕರಾವಳಿ ಪ್ರದೇಶಗಳು ಮತ್ತು ಪುದುಚೇರಿ ಪ್ರದೇಶದಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ.