ಬೆಂಗಳೂರು-ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಶಾಲೆಗಳಿಗೆ ರಜೆ ಕೊಡುವಂತೆ ಪೋಷಕರು ಒತ್ತಾಯ ಮಾಡಿದ್ದಾರೆ ಹೀಗಾಗಿ ಸ್ವಯಂಪ್ರೇರಿತರಾಗಿ ಸೋಮವಾರ ಕೆಲ ಖಾಸಗಿ ಶಾಲೆಗಳು ರಜೆ ಘೋಷಣೆ ಮಾಡಿದೆ. ರುಪ್ಸಾ ಅಡಿಯಲ್ಲಿ ಬರುವ ಕೆಲ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.ನಾಳಿನ ರಜೆ ಹಿನ್ನೆಲೆ.., ಬೇರೆ ರಜೆ ದಿನ ಶಾಲೆ ನಡೆಸಲು ನಿರ್ಧಾರ ಮಾಡಲಾಗಿದೆ.ಪರೀಕ್ಷೆ ಹತ್ತಿರವಿರುವ ಹಿನ್ನೆಲೆ ನಾಳೆ ಬದಲಿಗೆ ಭಾನುವಾರ ತರಗತಿ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ರುಪ್ಸಾ ಅಧ್ಯಕ್ ಲೋಕೇಶ್ ತಾಳಿಕಟ್ಟೆ ಹೇಳಿದ್ದಾರೆ.