Select Your Language

Notifications

webdunia
webdunia
webdunia
webdunia

22 ಶಾಲೆಗಳಿಗೆ ರಜೆ ಘೋಷಣೆ ?

22 ಶಾಲೆಗಳಿಗೆ ರಜೆ ಘೋಷಣೆ ?
ಬೆಳಗಾವಿ , ಸೋಮವಾರ, 22 ಆಗಸ್ಟ್ 2022 (12:31 IST)
ಬೆಳಗಾವಿ : ಜಿಲ್ಲೆಯಲ್ಲಿ ಕಳೆದ 18 ದಿನಗಳಿಂದ ನಾಪತ್ತೆ ಆಗಿದ್ದ ಚಿರತೆ ಮತ್ತೆ ಪ್ರತ್ಯಕ್ಷವಾಗಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ನಗರ ಮತ್ತು ಗ್ರಾಮೀಣ ಭಾಗದ ವ್ಯಾಪ್ತಿಯಲ್ಲಿರುವ 22 ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

ನಗರದ ಹಿಂಡಲಗಾ ರಸ್ತೆಯ ವನಿತಾ ವಿದ್ಯಾಲಯ ಬಳಿಯ ಡಬಲ್ ರಸ್ತೆಯಲ್ಲಿ ಇಂದು ಬೆಳಗಿನ ಜಾವ ಚಿರತೆ ಪತ್ತೆಯಾಗಿದೆ. ಬಸ್ ಚಾಲಕರೊಬ್ಬರು ಚಿರತೆ ಓಡಾಡುತ್ತಿರುವ ದೃಶ್ಯವನ್ನು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.

ಇತ್ತ ಚಿರತೆ ಪತ್ತೆಯಾದ ಹಿನ್ನೆಲೆ ಶಾಲಾ ಮಕ್ಕಳು ಹಾಗೂ ಪೋಷಕರು ಭಯದ ವಾತಾವರಣದಲ್ಲಿ ಕಾಲ ಕಳೆಯುವಂತಾಗಿದೆ. ಚಿರತೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಇಂದು ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯ ವ್ಯಾಪ್ತಿಯಲ್ಲಿನ 22 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ ನಾಲತವಾಡ ತಿಳಿಸಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ವಸ್ತುಗಳ ಮೇಲೂ ಉಳಿಯಬಹುದು ಮಂಕಿಪಾಕ್ಸ್ !