Select Your Language

Notifications

webdunia
webdunia
webdunia
webdunia

ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ

Holiday for schools and colleges in Udupi district
bangalore , ಮಂಗಳವಾರ, 5 ಜುಲೈ 2022 (19:46 IST)
ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿಉ ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕುಗಳಿಗೆ ರಜೆ ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್‌ ಆದೇಶ ಹೊರಡಿಸಿದ್ದಾರೆ.ಮುಂದಿನ ಎರಡು ದಿನಗಳ ಕಾಲ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ನಿನ್ನೆಯಷ್ಟೇ ಅಪರ ಜಿಲ್ಲಾಧಿಕಾರಿಗಳು ಅತೀ ಹೆಚ್ಚು ಮಳೆ ಸುರಿಯುತ್ತಿರುವ ಹೆಬ್ರಿ ತಾಲೂಕಿನ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಿದ್ದರು. ಆದ್ರೆ ಇಂದು ಕಳೆದ ರಾತ್ರಿ ಸುರಿದ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆಯನ್ನು ನೀಡಲಾಗಿದೆ. ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯಾರ್ಥಿ ಗುಂಪುಗಳ ನಡುವೆ ಬಾಂಬ್ ತೂರಾಟ!