Daily Horoscope
✕

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ: ವಿಸ್ಮಯ ಕಂಡು ಪುಳಕಿತರಾದ ಭಕ್ತಗಣ

Sampriya
ಶುಕ್ರವಾರ, 17 ಅಕ್ಟೋಬರ್ 2025 (14:23 IST)
Photo Credit X
ಕೊಡಗು: ಜಿಲ್ಲೆಯ ಭಾಗಮಂಡಲ ಸಮೀಪ ತಲಕಾವೇರಿಯಲ್ಲಿ ಇಂದು ಮಧ್ಯಾಹ್ನ ಕಾವೇರಿ ತೀರ್ಥೋದ್ಭವವಾಗಿದೆ. ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಿದಳು. ಈ ವಿಸ್ಮಯಕಾರಿ ಕ್ಷಣ ಕಂಡ ಭಕ್ತರು ಪುನೀತರಾದರು.

ಇಂದು ಕಾವೇರಿ ತಾಯಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ್ದಾಳೆ. ದೇವಿಯ ಆಶೀರ್ವಾದ ಪಡೆಯಲು ಸಾವಿರಾರು ಭಕ್ತರು ಸೇರಿದ್ದರು. ಕೊಡಗಿನ ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ, ಹಾಡು ನೃತ್ಯದ ಮೂಲಕ ಕಾವೇರಿ ಮಾತೆಗೆ ಆರತಿ ಬೆಳಗಿ ಸ್ವಾಗತಿಸಿದ್ದಾರೆ.

ಇದೀಗ ಸೂರ್ಯ ಕನ್ಯಾರಾಶಿಯಿಂದ ತುಲಾರಾಶಿಗೆ ಪಥ ಬದಲಾಯಿಸಿದ್ದು, ಈ ವೇಳೆ ಮಕರ ಲಗ್ನದಲ್ಲಿ ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ಉದ್ಭವಿಸಿದಳು. ಕಾರ್ಯಕ್ರಮದಲ್ಲಿ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭಾಗವಹಿಸಿದ್ದರು.

ಸಂಕ್ರಾತಿಯಂದು ತಲಕಾವೇರಿಯಲ್ಲಿನ ಕುಂಡಿಕೆಯಲ್ಲಿ ಪ್ರತಿ ವರ್ಷ ಕಾವೇರಿ ತೀರ್ಥ ರೂಪದಲ್ಲಿ ದರ್ಶನ ನೀಡುತ್ತಾಳೆ ಎನ್ನುವುದು ಪುರಾತನ ಕಾಲದಿಂದಲೂ ಇರುವ ನಂಬಿಕೆ. ಈ ಸಂದರ್ಭ ಸಹಸ್ರಾರು ಭಕ್ತರು ತೀರ್ಥರೂಪಿಣಿ ಕಾವೇರಿ ತಾಯಿಯನ್ನು ಕಣ್ತುಂಬಿಕೊಳ್ಳುತ್ತಾರೆ. ಕೇವಲ ಕೊಡಗು ಮಾತ್ರವಲ್ಲದೆ ರಾಜ್ಯದ ಮೂಲೆ ಮೂಲೆ ಹಾಗೂ ತಮಿಳುನಾಡಿನಿಂದಲೂ ಸಾಕಷ್ಟು ಭಕ್ತರು ಆಗಮಿಸಿ ಇಲ್ಲಿಂದ ತೀರ್ಥ ಕೊಂಡೊಯ್ಯುತ್ತಾರೆ.  <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಪಾನ್ ಪ್ರವಾಸದ ನಡುವೆಯೇ ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರಿಗೆ ಸಿಎಂ ಡಿ.ಕೆ. ಶಿವಕುಮಾರ್ ವಿಡಿಯೋ ಕರೆ

ಏನು ಮಾಡ್ತೀರೋ ಮಾಡ್ಕೊಳ್ಳಿ.. ಫುಟ್ ಪಾತ್ ಮೇಲೆ ಬೈಕ್ ಚಲಾಯಿಸಿದ ಬೈಕ್ ಸವಾರರಿಗೆ ತಕ್ಕ ಪಾಠ ಕಲಿಸಿದ ಮಹಿಳೆಯರು Video

ರಾಜೀವ್ ಗಾಂಧಿ ಭದ್ರತೆ ಹಿಂಪಡೆಯಲಾಗಿತ್ತು, ಮುಂದಿನ ಬಾರಿ ತಂದೆಯ ಅಂತ್ಯಕ್ರಿಯೆಗೆ ಬರಬೇಕಾಗಬಹುದು ಎನಿಸಿತ್ತು: ರಾಹುಲ್ ಗಾಂಧಿ

ದಿಬ್ರುಗಢದಲ್ಲಿ ಚಿರತೆ ದಾಳಿ: ಲೈವ್ ವಿಡಿಯೋದಲ್ಲಿ ಸೆರೆಯಾದ ಘಟನೆ, ಎದ್ನೋ ಬಿದ್ನೋ ಎಂದು ಓಡಿದ ಜನ Video

ಇಂದಿನ ಚಿನ್ನ, ಬೆಳ್ಳಿ ದರ: ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಬಂಗಾರದ ಬೆಲೆ ಮತ್ತೆ ಇಳಿಕೆಯಾಯ್ತಾ, ಇಲ್ಲಿದೆ ಸಂಪೂರ್ಣ ವಿವರ

ಮುಂದಿನ ಸುದ್ದಿ
Show comments