Select Your Language

Notifications

webdunia
webdunia
webdunia
webdunia

ಧರ್ಮಸ್ಥಳ ಬುರುಡೆ ರಹಸ್ಯ: ಎಸ್‌ಐಟಿ ತನಿಖೆ ಬಗ್ಗೆ ಪರಮೇಶ್ವರ್ ಬಿಗ್ ಅಪ್ಡೇಟ್

Dharmasthala Mass Burial Case

Sampriya

ಬೆಂಗಳೂರು , ಮಂಗಳವಾರ, 30 ಸೆಪ್ಟಂಬರ್ 2025 (20:15 IST)
Photo Credit X
ಬೆಂಗಳೂರು: ಧರ್ಮಸ್ಥಳ ಸುತ್ತಮುತ್ತಾ ಹಲವು ಶವಗಳನ್ನು ಹೂತಿಟ್ಟ ಪ್ರಕರಣದ ಎಸ್‌ಐಟಿ ತನಿಖೆ ಶೀಘ್ರದಲ್ಲೇ ಮುಕ್ತಯವಾಗಲಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು. 

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣದಲ್ಲಿ ಆದಷ್ಟು ಶೀಘ್ರದಲ್ಲಿ ಎಸ್‌ಐಟಿಯಿಂದ ತನಿಖಾ ವರದಿ ಪಡೆಯಲು ಸರ್ಕಾರ ನಿರ್ಧರಿಸಿದೆ. ಈ ವಿಚಾರವಾಗಿ ತನಿಖೆಯನ್ನು ಬೇಗ ಮುಗಿಸಲು ತಿಳಿಸಿದ್ದೇವೆ ಎಂದರು. 

ಎಫ್‌ಎಸ್‌ಎಲ್ ವರದಿ ಇನ್ನೂ ಬಂದಿಲ್ಲ. ಇತ್ತೀಚಿನ ಸಾಕ್ಷ್ಯಗಳನ್ನು ಎಫ್‌ಎಸ್‌ಎಲ್‌ಗೆ ಕಳಿಸಲಾಗಿದೆ. ಈ ವಿಚಾರವಾಗಿ ಎಸ್‌ಐಟಿ ತನಿಖೆ ನಡೆಸುತ್ತಿದೆ. ಆದಷ್ಟು ಶೀಘ್ರದಲ್ಲಿ ಇಡೀ ತನಿಖೆಯನ್ನು ಮುಗಿಸಬೇಕು ಅಂತ ಎಸ್‌ಐಟಿಗೆ ತಿಳಿಸಿದ್ದೇವೆ. 

ಸುಪ್ರೀಂಕೋರ್ಟ್ ನಲ್ಲಿ ಚಿನ್ನಯ್ಯ ಪಿಐಎಲ್ ವಜಾ ಆದ ವಿಚಾರವನ್ನೂ ಎಸ್‌ಐಟಿನವರು ವರದಿಯಲ್ಲಿ ದಾಖಲು ಮಾಡಿಯೇ ಕೊಡುತ್ತಾರೆ. ಹೊಸ ದೂರುಗಳು ಬಂದಿವೆ. ಹಲವರು ಹೇಳಿಕೆಗಳನ್ನು ಕೊಡ್ತಿದ್ದಾರೆ. ಇದಕ್ಕೆಲ್ಲ ಅಂತಿಮ ಹಾಡಲು ಹೇಳಿದ್ದೇವೆ ಎಂದು ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮಂಗಳೂರು ದಸರಾ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್‌ ಟೂರ್‌ಗೆ ಭರ್ಜರಿ ರೆಸ್ಪಾನ್ಸ್‌, ಪ್ರವಾಸಿಗರಿಗೆ ಇಲ್ಲಿದೆ ಗುಡ್‌ನ್ಯೂಸ್‌