ಬೆಂಗಳೂರು: ಸಿಎಂ ಸಿದ್ದರಾಮಯ್ಯನವರನ್ನು ಕೊಂದರೆ ಹಿಂದೂಗಳಿಗೆ ನೆಮ್ಮದಿ ಎಂದಿದ್ದ ವ್ಯಕ್ತಿಯೊಬ್ಬನನ್ನು ಈಗ ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಸಂಪತ್ ಸಾಲಿಯಾನ್ ಎಂಬ ಹೋಂ ಗಾರ್ಡ್ ಒಬ್ಬಾತನನ್ನು ಬಂಧಿಸಲಾಗಿದೆ. ಈತ ತನ್ನ ಸೋಷಿಯಲ್ ಮೀಡಿಯಾ ಪೇಜ್ ಮುಖಾಂತರ ಸಿದ್ದರಾಮಯ್ಯನನ್ನು ಕೊಂದರೆ ಹಿಂದೂಗಳಿಗೆ ನೆಮ್ಮದಿ ಎಂದು ಕಾಮೆಂಟ್ ಹಾಕಿದ್ದ.
ಬೆಂಗಳೂರಿನಲ್ಲಿ ಹೋಂ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಈತ ಉಡುಪಿಯ ಕಾರ್ಕಳ ಮೂಲದವನು ಎಂದು ಪತ್ತೆ ಹಚ್ಚಲಾಗಿದೆ. ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಬಳಿಕ ಸಂಪತ್ ಇಂತಹದ್ದೊಂದು ಕಾಮೆಂಟ್ ಹಾಕಿದ್ದ.
ಮಂಗಳೂರಿನ ಸುಹಾಸ್ ಹತ್ಯೆ ಪ್ರಕರಣದ ಬಳಿಕ ಪೊಲೀಸರು ಸೋಷಿಯಲ್ ಮೀಡಿಯಾದಲ್ಲಿ ಧ್ವೇಷ ಸಂದೇಶ ಹರಡುವವರ ಬಗ್ಗೆಯೂ ಕಟ್ಟೆಚ್ಚರ ವಹಿಸಿದ್ದಾರೆ. ಇದರ ಬೆನ್ನಲ್ಲೇ ಸಂಪತ್ ನನ್ನು ಪೊಲೀಸರು ಬಂಧಿಸಿದ್ದಾರೆ.