Select Your Language

Notifications

webdunia
webdunia
webdunia
webdunia

ಇಲ್ಲಿನ ಮತದಾರರಲ್ಲದವರಿಗೆ ಇನ್ಮುಂದೆ ಗೃಹಜ್ಯೋತಿ ಸೌಲಭ್ಯ ಕಟ್: ಡಿಕೆ ಶಿವಕುಮಾರ್‌

DK SHIVKUMAR
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆ ಸಂಬಂಧ ರಾಜ್ಯ ಸರ್ಕಾರ ಇದೀಗ ಮಹತ್ವದ ಪರಿಷ್ಕರಣೆಗೆ ಕೈ ಹಾಕಿದೆ.

 ಯೋಜನೆಯ ದುರ್ಬಳಕೆ ತಡೆಗಟ್ಟುವ ಸಲುವಾಗಿ ಹಾಗೂ ಕೇವಲ ಈ ಯೋಜನೆ ಅರ್ಹರಿಗೆ ಮಾತ್ರ ಸೌಲಭ್ಯ ಸಿಗುವ ಉದ್ದೇಶದಿಂದ ಮನೆ ಮನೆಗೆ ಹೊಸ ಅರ್ಜಿ ವಿತರಿಸಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. 

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಆಯೋಜಿಸಲಾಗಿದ್ದ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನೌಕರರ ಸಂಘ ಮತ್ತು ಅಸೋಸಿಯೇಷನ್‌ಗಳ ಒಕ್ಕೂಟದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಘೋಷಣೆ ಮಾಡಿದರು. 

ಸದ್ಯ ರಾಜ್ಯದಲ್ಲಿ ಸುಮಾರು 1.64 ಕೋಟಿ ಜನರಿಗೆ ಗೃಹಜ್ಯೋತಿ ಸೌಲಭ್ಯ ನೀಡಲಾಗುತ್ತಿದ್ದು, ಇದರಲ್ಲಿ ವ್ಯಾಪಕ ದುರ್ಬಳಕೆಯಾಗುತ್ತಿರುವ ಬಗ್ಗೆ ಮಾಹಿತಿ ಲಭಿಸಿದೆ. ಈ ಹಿನ್ನೆಲೆ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗೆ ಜರಡಿ ಹಿಡಿಯಲು ಸಜ್ಜಾಗಿದೆ.

ನಮ್ಮ ರಾಜ್ಯದ ಜನರಿಗೆ ಮಾತ್ರ ಈ ಸೌಲಭ್ಯ ಸಿಗಬೇಕು. ಬದುಕಲು ಬಂದಿರುವ ಹೊರರಾಜ್ಯದವರಿಗೆ ಅಥವಾ ಇಲ್ಲಿನ ಮತದಾರರಲ್ಲದವರಿಗೆ ಇನ್ನು ಮುಂದೆ ಗೃಹಜ್ಯೋತಿ ಸೌಲಭ್ಯ ಸಿಗುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. 



.

Share this Story:

Follow Webdunia kannada

ಮುಂದಿನ ಸುದ್ದಿ

ಪಕ್ಷದ ನಾಯಕರ ವಿರುದ್ಧ ಬಾಯ್ಬಿಟ್ಟ ರಾಜ್ಯ ಬಿಜೆಪಿ ಘಟಕದ ವಕ್ತಾರ ಎಂಜಿ ಮಹೇಶ್‌ ಬಿಗ್ ಶಾಕ್‌