Select Your Language

Notifications

webdunia
webdunia
webdunia
webdunia

ದಾವಣಗೆರೆಗೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ

ದಾವಣಗೆರೆಗೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ
ಬೆಂಗಳೂರು , ಗುರುವಾರ, 2 ಸೆಪ್ಟಂಬರ್ 2021 (11:49 IST)
ಬೆಂಗಳೂರು(ಸೆ.2): ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಮಧ್ಯಕರ್ನಾಟಕದ ರಾಜಧಾನಿ ದಾವಣಗೆರೆಗೆ ಆಗಮಿಸಲಿದ್ದಾರೆ.ದಾವಣಗೆರೆ ಜಿಲ್ಲೆ ಹರಿಹಾರ ತಾಲ್ಲೂಕಿನ ಕೊಂಡಜ್ಜಿಯಲ್ಲಿ ನಿರ್ಮಾಣ ಮಾಡಿರುವ ಪೊಲೀಸ್ ಪಬ್ಲಿಕ್ ಶಾಲೆ ಹಾಗೂ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ನಿರ್ಮಾಣವಾಗಿರುವ ಗಾಂಧಿಭವನ ಉದ್ಘಾಟಿಸಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ಆರ್.ನಿರಾಣಿ, ಸಂಸದ ಜಿ.ಎಂ.ಸಿದ್ದೇಶ್ವರ ಸೇರಿದಂತೆ ಸ್ಥಳೀಯ ಶಾಸಕರು, ವಿಧಾನಪರಿಷತ್ ಸದಸ್ಯರು ಮತ್ತಿತರರು ಭಾಗವಹಿಸಲಿದ್ದಾರೆ. ಅಮಿತ್ ಶಾ ಆಗಮನದ ಹಿನ್ನೆಲ್ಲೆಯಲ್ಲಿ ದಾವಣಗೆರೆ ಜಿಲ್ಲೆಯಾದ್ಯಂತ ಭಾರೀ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಮಧ್ಯಾಹ್ನ ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಗೃಹ ಸಚಿವರು, ಸೇನಾ ಹೆಲಿಕಾಪ್ಟರ್ ಮೂಲಕ ದಾವಣಗೆರೆಗೆ ಪ್ರಯಾಣ ಬೆಳೆಸಲಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರ ಪುತ್ರಿ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ.
ನಂತರ ಜಿಎಂಐಟಿ ಕಾಲೇಜು ಅವರಣದಲ್ಲಿ ನಿರ್ಮಾಣವಾದ ಜಿಎಂಐಟಿ ಕೇಂದ್ರ ಗ್ರಂಥಾಲಯ (ಸಂಸದ ಜಿ.ಎಂ.ಸಿದ್ದೇಶ್ವರ್ ಒಡೆತನದ ಕಾಲೇಜು) ಉದ್ಘಾಟಿಸುವರು. ಸಂಜೆ 5 ಗಂಟೆ ವೇಳೆಗೆ ಹುಬ್ಬಳ್ಳಿಗೆ ಜಿಎಂಐಟಿ ಹೆಲಿಪ್ಯಾಡ್ನಿಂದ ಪ್ರಯಾಣ ಬೆಳೆಸಲಿದ್ದಾರೆ. ಸಿಎಂ ಜೊತೆ ಮಾತುಕತೆ:ಕಾರ್ಯಕ್ರಮದ ನಡುವೆ ಅಮಿತ್ ಶಾ ಅವರು ಜಿಎಂಐಟಿ ಅತಿಥಿಗೃಹದಲ್ಲಿ ಅರ್ಧ ಗಂಟೆ ಮತ್ತು ಹುಬ್ಬಳ್ಳಿಯಲ್ಲಿ ಒಂದು ಗಂಟೆ ಸಮಯವನ್ನು ಕಾಯ್ದಿರಿಸಿಕೊಂಡಿದ್ದಾರೆ. ಈ ಸಮಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ ಬಿಜೆಪಿ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ.
ಪಕ್ಷದಲ್ಲಿನ ಅಸಮಾಧಾನ, ರೆಬೆಲ್ ಚಟುವಟಿಕೆಗಳ ನಿಯಂತ್ರಣಕ್ಕೆ ಸೂಚನೆ ಕೊಡುವ ನೀಡಲಿದ್ದಾರೆ. ಅಲ್ಲದೇ, ಯಡಿಯೂರಪ್ಪ ರಾಜ್ಯ ಪ್ರವಾಸ ಕುರಿತು ಸ್ಪಷ್ಟ ಸೂಚನೆ ಮೂಲಕ ಗೊಂದಲ ನಿವಾರಿಸುವ ಕೆಲಸ ಮಾಡಲಿದ್ದಾರೆ ಎನ್ನಲಾಗುತ್ತಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮದುವೆ ಸಮಾರಂಭದಲ್ಲಿ ಆಹಾರ ಸೇವಿಸಿ 45 ಮಕ್ಕಳು ಸೇರಿ 100 ಜನ ಅಸ್ವಸ್ಥ