Publish Date: Sat, 22 Oct 2022 (16:02 IST)
Updated Date: Sat, 22 Oct 2022 (16:13 IST)
ಇಂದು ದೇಶದ ಗೃಹ ಸಚಿವ ಅಮಿತ್ ಶಾ ಅವರ ಹುಟ್ಟುಹಬ್ಬ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹುಟ್ಟುಹಬ್ಬಕ್ಕೆ ಅನೇಕ ಗಣ್ಯರು ಶುಭಾಶಯಗಳನ್ನು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮಿತ್ ಶಾ ಕೆಲಸವನ್ನ ಶ್ಲಾಘಿಸಿದ್ದು, ಅವರಿಗೆ ದೇವರು ಆರೋಗ್ಯಕರ ಜೀವನ ನೀಡಲಿ ಎಂದು ಹಾರೈಸಿದರು. ಮಾಜಿ ಸಿಎಂ B.S ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಅಮಿತ್ ಶಾ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ರು. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ನೀಡಿ, ದೇಶಸೇವೆಯಲ್ಲಿ ನೀವು ಮತ್ತಷ್ಟು ಯಶಸ್ಸನ್ನು ಸಾಧಿಸುವಂತಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕೂಡ ನರೇಂದ್ರ ಮೋದಿಯವರೊಂದಿಗೆ ಅಮಿತ್ ಶಾ ಇರುವ ಹಳೆಯ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ ಮತ್ತು ಅಮಿತ್ ಶಾ ಅವರು ಪ್ರಧಾನಿ ಮೋದಿಯವರ ಪಕ್ಕದಲ್ಲಿ ದೃಢವಾಗಿ ಉಳಿದಿದ್ದಾರೆ ಮತ್ತು ಬಿಜೆಪಿಯ ಬೆಳವಣಿಗೆಯಲ್ಲಿ ಪ್ರಮುಖರಾಗಿದ್ದಾರೆ ಎಂದು ಹೇಳಿದ್ದಾರೆ.