Select Your Language

Notifications

webdunia
webdunia
webdunia
webdunia

ಪೋಲೀಸರ ವಿರುದ್ಧ ಗೃಹ ಸಚಿವರು ಕಿಡಿ

ಪೋಲೀಸರ ವಿರುದ್ಧ ಗೃಹ ಸಚಿವರು ಕಿಡಿ
ಬೆಂಗಳೂರು , ಗುರುವಾರ, 20 ಜನವರಿ 2022 (14:14 IST)
ಸಮಾಜ ವಿರೋಧಿ ಶಕ್ತಿಗಳೊಂದಿಗೆ ಗುರುತಿಸಿಕೊಂಡು ಅಪರಾಧಿ ಕೃತ್ಯಗಳಲ್ಲಿ ಭಾಗವಹಿಸುವ ಯಾವುದೇ ಪೊಲೀಸ್ ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದಿಲ್ಲಿ ತಿಳಿಸಿದ್ದಾರೆ.
 
ಇಂದು ಚಾಮರಾಜಪೇಟೆ ವ್ಯಾಪ್ತಿಯಲ್ಲಿ ನಿರ್ಮಿಸಲಾಗುವ ಟ್ರಾಫಿಕ್ ಪೊಲೀಸ್ ಠಾಣೆಯ ಶಂಕುಸ್ಥಾಪನೆ ಕಾರ್ಯ ನೆರವೇರಿಸಿ,
ಸುದ್ದಿಗಾರರೊಂದಿಗೆ ಸಚಿವರು ಮಾತನಾಡುತ್ತಿದ್ದರು.
ಮುಖ್ಯಮಂತ್ರಿಗಳ ನಿವಾಸದ ಬಳಿ, ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿತವಾಗಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ನಿಷೇಧಿತ ಗಾಂಜಾ ಮಾರಾಟ ಜಾಲದೊಂದಿಗೆ ಸಂಪರ್ಕ ಹೊಂದಿದ್ದರು ಎನ್ನಲಾದ ವಿಷಯಕ್ಕೆ ಸಂಬಂಧಿಸಿದಂತೆ, ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. "ಇಂತಹ ಹೀನ ಕೃತ್ಯಗಳನ್ನು ಸಹಿಸಲಾಗುವುದಿಲ್ಲ, ಕೇವಲ ಬೆರಳಣಿಕೆ ಯಷ್ಟು ಮಂದಿ ಸಿಬ್ಬಂದಿಯಿಂದ, ಸುಮಾರು ಒಂದು ಲಕ್ಷಕ್ಕೂ ಮೀರಿ ಇರುವ ಇಲಾಖೆ ಸಿಬ್ಬಂದಿಗಳಿಗೆ ಕೆಟ್ಟ ಹೆಸರು ಬರುತ್ತದೆ" ಎಂದರು.
 
ಅಪರಾಧ ಜಗತ್ತನ್ನು ಬಗ್ಗು ಬಡಿಯಲು ನೇಮಕವಾದ, ಸಿಬ್ಬಂದಿಗಳು, ಅವರೊಂದಿಗೇ ಶಾಮೀಲಾಗುವುದು ಅಕ್ಷಮ್ಯ. ಅಪರಾಧ ಎಂದು ಅಭಿಪ್ರಾಯಿಸಿದ ಸಚಿವರು "ಅಂಥವರನ್ನು ಕೇವಲ ಸೇವೆಯಿಂದ ಅಮಾನತು ಮಾಡಿದರೆ ಸಾಲಾದು, ಅಂಥವರು, ಇಲಾಖೆಯಲ್ಲಿ ಇರಬಾರದು," ಎಂದು ಖಾರವಾಗಿ ನುಡಿದರು. "ಈ ವಿಷಯಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ಪಡೆದುಕೊಂಡು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು" ಎಂದರು.
 
ಕೆಲವು ಯುವ ಕಾಂಗ್ರೆಸ್ ನಾಯಕರು, ಕಳೆದ ರಾತ್ರಿ ಹೊಡೆದಾಡಿಕೊಂಡಿದ್ದಾರೆ, ಎನ್ನಲಾದ ವಿಷಯಕ್ಕೆ ಸಂಬಂಧಿಸಿದಂತೆ, ಉತ್ತರಿಸಿದ ಸಚಿವರು, "ನಗರದ ಪೊಲೀಸರು, ಈವರೆಗೆ ಯಾವುದೇ ದೂರನ್ನು ಯಾರಿಂದಲೂ ಪಡೆದುಕೊಂಡಿಲ್ಲ, ದೂರು ದಾಖಲಾದರೆ, ನಮ್ಮ ಪೊಲೀಸರು ವಿಚಾರಣೆ ನಡೆಸುತ್ತಾರೆ" ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ತಂದೆಯ ಎದುರೇ ಮಗಳ ಮೇಲೆ ಅತ್ಯಾಚಾರ