Select Your Language

Notifications

webdunia
webdunia
webdunia
webdunia

ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಒತ್ತಾಯ

ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಒತ್ತಾಯ
ಬೆಂಗಳೂರು , ಗುರುವಾರ, 5 ಜನವರಿ 2017 (14:46 IST)
ಯುವತಿಯರ ಮೇಲೆ ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ರಾಜ್ಯ ಸರಕಾರದ ವೈಫಲ್ಯವೇ ಕಾರಣವಾಗಿದ್ದು, ಈ ಕೂಡಾಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಬಿಜೆಪಿ ಮಹಿಳಾ ಮೋರ್ಚಾ ಒತ್ತಾಯಿಸಿದೆ.
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯುವತಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿ ನಗರದ ಆನಂದರಾವ್ ಸರ್ಕಲ್‌ ಬಳಿ ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಬೃಹತ್ ಪ್ರತಿಭಟನೆ ಕೈಗೊಂಡಿತ್ತು. 
 
ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಹೊಂದಿರುವ ಬೆಂಗಳೂರಿನಲ್ಲಿ ಈ ರೀತಿಯ ಹೇಯ ಕೃತ್ಯ ನಡೆದಿರುವುದು ಕಪ್ಪುಚುಕ್ಕಿಯಾಗಿ ಪರಿಣಮಿಸಿದೆ. ಪೊಲೀಸರು ನಿಷ್ಪಕ್ಷಪಾತವಾಗಿ ಕೆಲಸ ಮಾಡಲು ರಾಜ್ಯ ಸರಕಾರ ಅನುವು ಮಾಡಿಕೊಡದೆ ಇರುವುದೇ ಈ ಕೃತ್ಯಗಳಿಗೆ ಕಾರಣ. ಈ ಕೂಡಾಲೇ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.  
 
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಎಂಜಿ ರಸ್ತೆಯಲ್ಲಿ ನೆರೆದಿದ್ದ ಮಹಿಳೆಯರನ್ನು ಲೈಂಗಿಕವಾಗಿ ಹಿಂಸಿಸಿದ್ದರು. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಭದ್ರತೆಗೆಂದು ಸಾವಿರಾರು ಪೊಲೀಸರ ನಿಯೋಜನೆಗೊಂಡಿದ್ದರಾದರೂ ಕಿಡಿಗೇಡಿಗಳನ್ನು ನಿಯಂತ್ರಿಸಲು ವಿಫಲರಾಗಿದ್ದರು. ಈ ಘಟನೆ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬ್ಯಾಂಕ್‌, ಎಟಿಎಂಗಳಲ್ಲಿ ಸರದಿಗೆ ನಿಂತ ಜನರನ್ನು ಲೇವಡಿ ಮಾಡಿದ ಬಿಜೆಪಿ ಮುಖಂಡ