Video: ನಮ್ಮ ಬಳಿ ದುಡ್ಡಿಲ್ಲ, ಕೇಂದ್ರ ಸರ್ಕಾರವನ್ನೇ ಕೇಳಬೇಕು: ಪರಮೇಶ್ವರ್

Krishnaveni K
ಬುಧವಾರ, 25 ಜೂನ್ 2025 (08:38 IST)
ಬೆಂಗಳೂರು: ನಮ್ಮ ಬಳಿ ದುಡ್ಡಿಲ್ಲ ಕೇಂದ್ರ ಸರ್ಕಾರವನ್ನೇ ಕೇಳಬೇಕು ಎಂದು ಗೃಹಸಚಿವ ಜಿ ಪರಮೇಶ್ವರ್ ಹೇಳಿರುವ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೇ ವಿಪಕ್ಷ ಬಿಜೆಪಿಗೆ ಪ್ರಬಲ ಅಸ್ತ್ರ ಸಿಕ್ಕಂತಾಗಿದೆ.

ಪರಮೇಶ್ವರ್ ಬಾದಾಮಿಯಲ್ಲಿ ಮಾತನಾಡುವಾಗ ಅಭಿವೃದ್ಧಿ ಯೋಜನೆಗಳಿಗೆ ನಮ್ಮ ಬಳಿ ಹಣವಿಲ್ಲ. ಕೇಂದ್ರವನ್ನೇ ಕೇಳಬೇಕು ಎಂದು ಹೇಳಿದ್ದ ವಿಡಿಯೋವನ್ನು ಬಿಜೆಪಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿತ್ತು. ಜೊತೆಗೆ ರಾಜ್ಯದ ಬೊಕ್ಕಸ ಖಾಲಿ ಮಾಡಿಕೊಂಡಿರುವ ಸಿದ್ದರಾಮಯ್ಯ ಸರ್ಕಾರ ಸಚಿವರ ಕೈಯಲ್ಲಿ ಹಣವಿಲ್ಲ ಎಂದು ಹೇಳಿಸಿದೆ ಎಂದು ವ್ಯಂಗ್ಯ ಮಾಡಿತ್ತು.

ಇದರ ಬೆನ್ನಲ್ಲೇ ಗೃಹಸಚಿವರು ಸ್ಪಷ್ಟನೆ ನೀಡಿದ್ದು ಕಾರ್ಯಕ್ರಮವೊಂದಕ್ಕೆ ಹೋಗಿದ್ದಾಗ ಮಾಧ್ಯಮಗಳು ನನ್ನ ಬಳಿ ತಮಾಷೆಯಾಗಿ ಈ ಬಗ್ಗೆ ಪ್ರಶ್ನೆ ಮಾಡಿದ್ದರು. ಅದಕ್ಕೇ ನಾನೂ ತಮಾಷೆಯ ಧಾಟಿಯಲ್ಲೇ ನಮ್ಮ ಬಳಿ ಹಣವಿಲ್ಲ ಎಂದಿದ್ದೆ ಅಷ್ಟೇ. ಆದರೆ ಅಭಿವೃದ್ಧಿ ಯೋಜನೆಗಳಿಗೆ ಬೇಕಾಗುವಷ್ಟು ಹಣ ನಮ್ಮಲ್ಲಿದೆ ಎಂದು ಸಮಜಾಯಿಷಿ ನೀಡಿದ್ದಾರೆ.

ಆದರೆ ಅದೇನೇ ಇದ್ದರೂ ಈಗ ಸರ್ಕಾರದ ಬೊಕ್ಕಸ ಗ್ಯಾರಂಟಿಗಳಿಂದಾಗಿ ಖಾಲಿಯಾಗಿದೆ ಎಂದು ಟೀಕಿಸುತ್ತಲೇ ಬಂದಿರುವ ಬಿಜೆಪಿಗೆ ಈ ಮಾತುಗಳು ಪ್ರಬಲ ಅಸ್ತ್ರ ಸಿಕ್ಕಂತಾಗಿದೆ. ಸಿದ್ದರಾಮಯ್ಯ ಸರ್ಕಾರ ಮತ್ತೊಮ್ಮೆ ಮುಜುಗರಕ್ಕೆ ಸಿಲುಕುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments