Webdunia - Bharat's app for daily news and videos

Install App

ಗಣೇಶೋತ್ಸವ ಆಚರಿಸುವವರಿಗೆ ಎಚ್ಚರಿಕೆ ಕೊಟ್ಟ ಗೃಹ ಸಚಿವ ಜಿ ಪರಮೇಶ್ವರ್

Krishnaveni K
ಗುರುವಾರ, 15 ಆಗಸ್ಟ್ 2024 (15:33 IST)
ಬೆಂಗಳೂರು: ಇನ್ನೇನು ಗಣೇಶ ಹಬ್ಬಕ್ಕೆ ಕೆಲವೇ ದಿನ ಬಾಕಿಯಿದ್ದು, ಹಬ್ಬ ಆಚರಣೆ ಮಾಡುವವರಿಗೆ ಗೃಹಸಚಿವ ಜಿ ಪರಮೇಶ್ವರ್ ಎಚ್ಚರಿಕೆಯ ಸಂದೇಶವೊಂದನ್ನು ರವಾನಿಸಿದ್ದಾರೆ.

ಗಣೇಶೋತ್ಸವ ಮೆರವಣಿಗೆ, ಸಂಭ್ರಮ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಂಡರೆ ಅಂತಹವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳುವುದಾಗಿ ಪರಮೇಶ್ವರ್ ಎಚ್ಚರಿಕೆ ಕೊಟ್ಟಿದ್ದಾರೆ. ಗಣೇಶೋತ್ಸವ ಮೆರವಣಿಗೆ ಸಂದರ್ಭದಲ್ಲಿ ಕೆಲವೊಮ್ಮೆ ಅಹಿತಕರ ಘಟನೆಗಳು ನಡೆಯುತ್ತವೆ. ಅದಕ್ಕಾಗಿ ಅವರು ಈ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟವಾಗಬೇಕು. ಇಲ್ಲಿನ ಜನ ಪರಸ್ಪರ ಪ್ರೀತಿ, ವಿಶ್ವಾಸದಿಂದಿರುತ್ತಾರೆ ಎಂಬ ನಂಬಿಕೆಯಿದೆ. ಹಾಗಿದ್ದರೂ ಗಣೇಶೋತ್ಸವ ನೆಪ ಮಾಡಿಕೊಂಡು ಶಾಂತಿ ಕದಡಲು ಯತ್ನಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಕಳೆದ 1 ವರ್ಷಗಳಿಂದ ರಾಜ್ಯದಲ್ಲಿ ಕೋಮು ಗಲಭೆಗಳಾಗಲು ಗೃಹ ಇಲಾಖೆ ಅವಕಾಶ ಕೊಟ್ಟಿಲ್ಲ. ಇದಕ್ಕೆ ಸಹಕರಿಸಿದ ರಾಜ್ಯದ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ಪ್ರಣಾಳಿಕೆಯಲ್ಲಿದ್ದಂತೇ ಶಾಂತಿ ಕಾಪಾಡಿದ್ದೇವೆ. ಇದು ಮುಂದೆಯೂ ಮುಂದುವರಿಯಬೇಕು ಎಂದು ಸಚಿವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments