Publish Date: Mon, 30 Oct 2023 (19:00 IST)
Updated Date: Mon, 30 Oct 2023 (19:14 IST)
ಕೇರಳದಲ್ಲಿ ಬಾಂಬ್ ಸ್ಫೋಟದ ಬೆನ್ನಲ್ಲೇ ರಾಜ್ಯದ ಎಲ್ಲ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುನ್ನೆಚ್ಚರಿಕೆ ಕ್ರಮವಾಗಿ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಅಂತಾ ಪರಮೇಶ್ವರ್ ಹೇಳಿದ್ದಾರೆ.