ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹಸಚಿವ ಪರಮೇಶ್ವರ್, ಸಾಕ್ಷ್ಯ ಸಿಕ್ಕಿಲ್ಲ ಅಂತ ಕ್ಲೀನ್ ಚಿಟ್ ಕೊಟ್ಟಿದ್ದಾರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.
ಮುಡಾ ಹಗರಣದಲ್ಲಿ ಲೋಕಾಯುಕ್ತ ಸಿಎಂ ಸಿದ್ದರಾಮಯ್ಯ ಮತ್ತು ಇತರೆ ಆರೋಪಿಗಳ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂಬ ಕಾರಣಕ್ಕೆ ಕ್ಲೀನ್ ಚಿಟ್ ನೀಡಿದೆ. ಇದರ ವಿರುದ್ಧ ಬಿಜೆಪಿ ಕಿಡಿ ಕಾರಿದೆ. ಗೃಹಸಚಿವ ಪರಮೇಶ್ವರ್ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದೆ.
ಇದೀಗ ಇದರ ಬಗ್ಗೆ ಇಂದು ಮಾಧ್ಯಮಗಳು ಗೃಹಸಚಿವ ಪರಮೇಶ್ವರ್ ಅವರನ್ನು ಪ್ರಶ್ನಿಸಿದೆ. ಇದಕ್ಕೆ ಉತ್ತರಿಸಿದ ಗೃಹಸಚಿವ ಪರಮೇಶ್ವರ್, ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಲೋಕಾಯುಕ್ತದವರು ಕ್ಲೀನ್ ಚಿಟ್ ಕೊಟ್ಟಿದ್ದಾರೆ. ಸಾಕ್ಷ್ಯ ಪುರಾವೆ ಇಲ್ಲ ಅಂದಾಗ ಅವರು ಈ ತೀರ್ಮಾನಕ್ಕೆ ಬಂದಿದ್ದಾರೆ. ಅದನ್ನು ಬಿಜೆಪಿ ಪ್ರಶ್ನೆ ಮಾಡುವುದು ಎಷ್ಟು ಸರಿ? ಬಿಜೆಪಿಗೆ ವಿರುದ್ಧವಾಗಿ ಬಂದಾಗ ಯಾವುದೂ ಸರಿ ಇಲ್ಲ ಅಂತಾನಾ? ಬೇಕಿದ್ರೆ ಕೋರ್ಟ್ ಗೆ ಹೋಗಿ ಸಿಬಿಐಗೆ ಕೊಇ ಎಂದು ಕೇಳಿ. ಕೋರ್ಟ್ ತೀರ್ಮಾನ ಮಾಡಿದರೂ ಅದನ್ನೇ ಹೇಳ್ತಾರೆ ಎಂದರೆ ಏನು ಹೇಳೋಣ ಎಂದು ಪರಮೇಶ್ವರ್ ಪ್ರಶ್ನೆ ಮಾಡಿದ್ದಾರೆ.