Publish Date: Thu, 07 Mar 2019 (16:03 IST)
Updated Date: Thu, 07 Mar 2019 (16:05 IST)
ರಾಜ್ಯದಲ್ಲಿ ಬಿಜೆಪಿ ಚುನಾವಣೆಗೆ ಸಿದ್ಧತೆ ಶುರುಮಾಡಿರುವಂತೆ ಕೇಂದ್ರ ಸಚಿವರು ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಚುನಾವಣೆಗೆ ಸಿದ್ಧತೆ ಆರಂಭಿಸಿದೆ .ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮಾರ್ಚ್ 9 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ .
ಬೆಳಿಗ್ಗೆ 10 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜನಾಥ್ ಸಿಂಗ್ ಆಗಮಿಸಲಿದ್ದಾರೆ. 10.30ಕ್ಕೆ ಮಂಗಳೂರು ಓಷನ್ ಪರ್ಲ್ ಹೋಟೆಲ್ ನಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 11ಗಂಟೆಗೆ ನಗರದ ನೆಹರೂ ಮೈದಾನದಲ್ಲಿ ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಗೆ ಎಂ ಜಿ ರಸ್ತೆಯಲ್ಲಿರುವ ಟಿ ಎಂ ಎ ಪೈ ಹಾಲ್ ನಲ್ಲಿ ಪ್ರಬುದ್ದರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಹೀಗಂತ ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ ತಿಳಿಸಿದ್ದಾರೆ.
ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ಪ್ರಮುಖರು ಭಾಗವಹಿಸಲಿದ್ದಾರೆ.